ಕರ್ನಾಟಕ

karnataka

ETV Bharat / state

ಶೀಘ್ರದಲ್ಲೇ 15 ಸಾವಿರ ಅತಿಥಿ ಶಿಕ್ಷಕರ ನೇಮಕ : ಸಚಿವ ಬಿ.ಸಿ.ನಾಗೇಶ್ - ಡಿ ಗ್ರೂಪ್ ಹುದ್ದೆ ಭರ್ತಿಗೆ ಕ್ರಮ ಸಚಿವ ಬಿ ಸಿ ನಾಗೇಶ್

ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ 21 ಶಿಕ್ಷಕರ ಮಂಜೂರಾತಿ ಅಗತ್ಯವಿದ್ದರೂ 13 ಶಿಕ್ಷಕರು ಮತ್ತು ಇಬ್ಬರು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯದಲ್ಲೇ ಪ್ರಕ್ರಿಯೆ ಆರಂಭಿಸಿ ಶಿಕ್ಷಕರ ಹೊಂದಾಣಿಕೆ ಮಾಡಲಾಗುವುದು ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಸಚಿವ ಬಿ.ಸಿ.ನಾಗೇಶ್
ಸಚಿವ ಬಿ.ಸಿ.ನಾಗೇಶ್

By

Published : Mar 10, 2022, 6:48 PM IST

ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರ ಕೊರತೆಯನ್ನು ಸರಿಪಡಿಸಲು 15 ಸಾವಿರ ಅತಿಥಿ ಶಿಕ್ಷಕರನ್ನು ಶೀಘ್ರ ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಸಚಿವ ಬಿ.ಸಿ.ನಾಗೇಶ್ ಮಾಹಿತಿ

ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪಿ. ರಾಜೀವ್ ಅವರ ಪರವಾಗಿ ದುರ್ಯೋಧನ ಐಹೊಳೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ. ಸದ್ಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಮೇನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಆ ನಂತರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ 21 ಶಿಕ್ಷಕರ ಮಂಜೂರಾತಿ ಅಗತ್ಯವಿದ್ದರೂ 13 ಶಿಕ್ಷಕರು ಮತ್ತು ಇಬ್ಬರು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯದಲ್ಲೇ ಪ್ರಕ್ರಿಯೆ ಆರಂಭಿಸಿ ಶಿಕ್ಷಕರ ಹೊಂದಾಣಿಕೆ ಮಾಡಲಾಗುವುದು ಎಂದು ಹೇಳಿದರು.

ಡಿ ಗ್ರೂಪ್ ಹುದ್ದೆ ಭರ್ತಿಗೆ ಕ್ರಮ:ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000 ಡಿ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಸದ್ಯದಲ್ಲೇ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಜೆಡಿಎಸ್‍ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉತ್ತರಿಸಿದರು.

ಕಾಲೇಜು ಶಿಕ್ಷಣ ಇಲಾಖೆ ಕಚೇರಿ ಹಾಗೂ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಡಿ ಗ್ರೂಪ್ ಹುದ್ದೆಗನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಹೀಗಾಗಿ ನಿಯಮಾನುಸಾರ ಟೆಂಡರ್ ಕರೆದು ನೇಮಕ ಮಾಡಲಾಗುವುದು ಎಂದು ಹೇಳಿದರು.

ABOUT THE AUTHOR

...view details