ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ 186 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಡಳಿಯಲ್ಲಿ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲಾಗುವುದು. ಗ್ರೂಪ್ ಸಿ ವಿಭಾಗದ ವಿವಿಧ ಹುದ್ದೆಗಳ ನೇಮಕಾತಿ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ನೇಮಕಾತಿ ಸಂಬಂಧ ಇನ್ನಿತರ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಕಲ್ಯಾಣ ಅಧಿಕಾರಿ-12, ಕ್ಷೇತ್ರ ನಿರೀಕ್ಷಕರು -60, ಪ್ರಥಮ ದರ್ಜೆ ಸಹಾಯಕರು 12, ಆಪ್ತ ಸಹಾಯಕರು 2, ದ್ವಿತೀಯ ದರ್ಜೆ ಸಹಾಯಕರು- 100 ಹುದ್ದೆಗೆ ಹಾಗೂ ಉಳಿಕೆ ವೃಂದದಲ್ಲಿ ಒಟ್ಟು 64 ಮತ್ತು ಕಲ್ಯಾಣ ಕರ್ನಾಟಕದಲ್ಲಿ 36 ಸೇರಿದಂತೆ ಒಟ್ಟು 186 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರೈಸಿರಬೇಕು. ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅಭ್ಯರ್ಥಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಆಪ್ತ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಮತ್ತು ಟೈಪಿಂಗ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಠ ವಯೋಮಿತಿ 35 ವರ್ಷವಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ. ಮತ್ತು ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.