ಬೆಂಗಳೂರು:2020-21ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಸ್ತು.. - guest lecture requirement
ವಿವಿಧ ಕಾರಣಗಳಿಂದ ತೆರವಾಗಿರುವ 2832 ಉಪನ್ಯಾಸಕರ ಹುದ್ದೆಗಳಿಗೆದುರಾಗಿ ಒಟ್ಟು 1835 ಅತಿಥಿ ಉಪನ್ಯಾಸಕರಿಗೆ ಮಾಸಿಕ ರೂ.9,000 ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ.

ಪದವಿ ಪೂರ್ವಶಿಕ್ಷಣ ಇಲಾಖೆ
ವಿವಿಧ ಕಾರಣಗಳಿಂದ ತೆರವಾಗಿರುವ 2832 ಉಪನ್ಯಾಸಕರ ಹುದ್ದೆಗಳಿಗೆದುರಾಗಿ ಒಟ್ಟು 1835 ಅತಿಥಿ ಉಪನ್ಯಾಸಕರಿಗೆ ಮಾಸಿಕ ರೂ.9,000 ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ.
ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 1835 ಅತಿಥಿ ಉಪನ್ಯಾಸಕರುಗಳ ಅವಶ್ಯಕತೆ ಇತ್ತು ಹೀಗಾಗಿ ಪಿಯು ಬೋರ್ಡ್ ಪ್ರಸ್ತಾವನೆಯನ್ನ ಸಲ್ಲಿಸಲಾಗಿತ್ತು. ಇದೀಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದು, ಗೌರವ ಧನ ನೀಡಲು 3 ಕೋಟಿ ಲಭ್ಯವಿದೆ ಎಂದು ತಿಳಿದುಬಂದಿದೆ.