ಬೆಂಗಳೂರು: ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದರು.
ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್ - ಸಿ.ಎಸ್ ಪಾಟೀಲ್
ಕರಾವಳಿ ಜಿಲ್ಲೆಗಳಲ್ಲಿ ಸೆ.19 ರಿಂದ ಸೆ.21ರವರೆಗೆ ರೆಡ್ ಅಲರ್ಟ್ ನೀಡಲಾಗಿದೆ. 22ರಂದು ಎಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಸೆ.20ರಿಂದ 22ರವರೆಗೆ ವ್ಯಾಪಕ ಮಳೆಯಾಗಲಿದೆ..
ಹವಾಮಾನ
ಕರಾವಳಿ ಜಿಲ್ಲೆಗಳಲ್ಲಿ ಸೆ.19 ರಿಂದ ಸೆ.21ರವರೆಗೆ ರೆಡ್ ಅಲರ್ಟ್ ನೀಡಲಾಗಿದೆ. 22ರಂದು ಎಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಸೆ.20ರಿಂದ 22ರವರೆಗೆ ವ್ಯಾಪಕ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿಗೆ ಎಲ್ಲೋ ಅಲರ್ಟ್ ಹಾಗೂ ಆರೇಂಜ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಸೆ.20,21ರಂದು ವ್ಯಾಪಕ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಾಳೆಯೂ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.