ಬೆಂಗಳೂರು :ಕೋಲಾರ ಜಿಲ್ಲೆಯ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಸಹಾಯ ಧನ ಒದಗಿಸದ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಸಹಾಯ ಧನ (ಸಬ್ಸಿಡಿ ಹಣ) ಒದಗಿಸಲು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ನಿರ್ದೇಶಿಸುವಂತೆ ಕೋರಿ ಕೋಲಾರ ಜಿಲ್ಲೆಯ 44 ಮಂದಿ ಸಫಾಯಿ ಕರ್ಮಚಾರಿಗಳು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ಅರ್ಜಿದಾರರಿಗೆ ಸಹಾಯ ಧನ ಕಲ್ಪಿಸದ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿತು.
ಓದಿ: ಸ್ಯಾಂಡಲ್ವುಡ್ಗೆ ಖಳ ನಾಯಕ ಪಾತ್ರದ ಮೂಲಕ ಎಂಟ್ರಿ ಕೊಟ್ಟಿದ್ದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ
ಅರ್ಜಿದಾರರು ಸಹಾಯ ಧನ ಕೋರಿ 2018ರಲ್ಲೇ ಅರ್ಜಿ ಸಲ್ಲಿಸಿದ್ದಾರೆ. ಆದರೆ, ನಿಗಮವು ಈವರೆಗೂ ಅವರ ಅರ್ಜಿಗಳನ್ನು ಪರಿಗಣಿಸಿ ಸಹಾಯ ಧನ ಬಿಡುಗಡೆ ಮಾಡಿಲ್ಲ. ಹೈಕೋರ್ಟ್ ಸೂಚನೆ ನೀಡಿದ್ದರೂ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.
ಶೌಚಗುಂಡಿ ಸ್ವಚ್ಛಗೊಳಿಸುವ ಉದ್ಯೋಗ ನಿಷೇಧ ಮತ್ತು ಪುನವರ್ಸತಿ ಕಾಯ್ದೆಯನ್ನು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿ ಮಾಡಿಲ್ಲ. ಸಮರೋಪಾದಿಯಲ್ಲಿ ಕಾಯ್ದೆಯ ನಿಯಮಗಳನ್ನು ಜಾರಿ ಮಾಡಬೇಕಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.