ಬೆಂಗಳೂರು :ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಮತ್ಸ್ಯ ಬಂಧನ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ವಿನೂತನ ಮಾದರಿಯ ಮೀನಿನ ಖಾದ್ಯಗಳ ತಯಾರಿಗೆ ಉಪಯೋಗಿಸುವ ಮಸಾಲೆ ಪದಾರ್ಥಗಳನ್ನು ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿಯಿಂದ ಫಿಷ್ ಚಿಪ್ಸ್ ಬಿಡುಗಡೆ - ಮತ್ಸ್ಯ ಬಂಧನ ಪ್ರೈವೇಟ್ ಲಿಮಿಟೆಡ್
ಭಾರತ ಜಗತ್ತಿನ 2ನೇ ಅತೀ ದೊಡ್ಡ ಮೀನುಗಾರಿಕಾ ಉತ್ಪಾದನಾ ರಾಷ್ಟ್ರವಾಗಿದೆ. ರಾಜ್ಯದಲ್ಲಿಯೂ ಕೂಡಾ ಮೀನುಗಾರಿಕೆಗೆ ವಿಫುಲ ಅವಕಾಶವಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ.
ಸುಮಾರು 2 ಲಕ್ಷ ಜನರು ಈಗಾಗಲೇ ಬೇಡಿಕೆ ಸಲ್ಲಿಸಿದ್ದಾರೆ. ಈ ಮಸಾಲೆ ಪದಾರ್ಥ ರಾಜ್ಯದಲ್ಲಿ ಹೊಸತೊಂದು ಮಾರುಕಟ್ಟೆ ಸೃಷ್ಟಿಸಲಿದೆ. ಭಾರತ ಜಗತ್ತಿನ 2ನೇ ಅತೀ ದೊಡ್ಡ ಮೀನುಗಾರಿಕಾ ಉತ್ಪಾದನಾ ರಾಷ್ಟ್ರವಾಗಿದೆ. ರಾಜ್ಯದಲ್ಲಿಯೂ ಕೂಡಾ ಮೀನುಗಾರಿಕೆಗೆ ವಿಫುಲ ಅವಕಾಶವಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮೀನಿನ ಹೊಸ ಉತ್ಪನ್ನಗಳನ್ನು ಉತ್ಪಾದಿಸುವ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದೆ.
ಮುಂದಿನ ದಿನಗಳಲ್ಲಿ ಮೀನುಗಾರಿಕೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮೀನಿನ ಚಿಪ್ಸ್ನಂತಹ ಉತ್ಪನ್ನಗಳನ್ನು ಉತ್ಪಾದಿಸಿ ಹೊಸ ಮಾರುಕಟ್ಟೆಯನ್ನು ತೆರೆಯುವ ಮೂಲಕ ಮೀನುಗಾರಿಕೆಯನ್ನು ಬೃಹತ್ ಉದ್ಯಮವಾಗಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರದಿಂದ ಚಿಂತನೆ ನಡೆಸಲಾಗಿದೆ.