ಬೆಂಗಳೂರು: ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಚಿತ್ರಕಲಾ ವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಬಾಕಿ ವೇತನವನ್ನು 15 ದಿನದಲ್ಲಿ ಬಿಡುಗಡೆ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಸದನಕ್ಕೆ ಭರವಸೆ ನೀಡಿದ್ದಾರೆ.
15 ದಿನದಲ್ಲಿ ಅತಿಥಿ ಉಪನ್ಯಾಸಕರ ಬಾಕಿ ವೇತನ ಬಿಡುಗಡೆ: ಡಿಸಿಎಂ ಭರವಸೆ
ವಿಧಾನ ಪರಿಷತ್ನ ಎರಡನೇ ದಿನದ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಎಸ್.ವಿ ಸಂಕನೂರು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಯಾಗದೆ ತೊಂದರೆಯಾಗಿದೆ. ತಕ್ಷಣ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹ ಮಾಡಿದರು.
ವಿಧಾನ ಪರಿಷತ್ನ ಎರಡನೇ ದಿನದ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಎಸ್.ವಿ ಸಂಕನೂರು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಯಾಗದೆ ತೊಂದರೆಯಾಗಿದೆ. ತಕ್ಷಣ ವೇತನ ಬಿಡುಗಡೆ ಮಾಡಬೇಕು, ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಡಿ ದರ್ಜೆ ನೌಕರರ ಸ್ಥಿತಿ ಕೂಡ ಇದೇ ಆಗಿದೆ. ಚಿತ್ರಕಲಾ ಮಹಾವಿದ್ಯಾಲದ ಉಪನ್ಯಾಸಕರ ವೇತನ ಕೂಡ ಬಿಡುಗಡೆ ಮಾಡಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್, ಸರ್ಕಾರಿ ಡಿಪ್ಲೊಮಾ ಕಾಲೇಜು, ಚಿತ್ರಕಲಾ ವಿದ್ಯಾಲಯ ಅತಿಥಿ ಉಪನ್ಯಾಸಕರಿಗೆ ತಾಂತ್ರಿಕ ಕಾರಣದಿಂದ ವೇತನ ಕೊಡಲು ಸಾಧ್ಯವಾಗಿಲ್ಲ. ಇನ್ನು ಹದಿನೈದು ದಿನದಲ್ಲಿ ಬಾಕಿ ವೇತನ ಬಿಡುಗಡೆ ಮಾಡಲಾಗುತ್ತದೆ ಎಂದು ಭರವಸೆ ನೀಡಿ ಚರ್ಚೆಗೆ ತೆರೆ ಎಳೆದರು.