ಬೆಂಗಳೂರು: ಲಾಕ್‌ಡೌನ್ ನಿಂದ ರಾಜ್ಯಾದ್ಯಂತ ಮಸೀದಿಗಳು ಬಾಗಿಲು ಮುಚ್ಚಿದ್ದವು. ಜೂನ್ 8 ರ ಬಳಿಕ ಮಸೀದಿಗಳ ಬಾಗಿಲು ತೆರೆಯಲಿದ್ದು, ರಾಜ್ಯ ಅಲ್ಪಸಂಖ್ಯಾತರ ಆಯೋಗ ಮುಂಜಾಗ್ರತಾ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.
ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ - ಮಸೀದಿಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ
ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗ ಬಿಡುಗಡೆಗೊಳಿಸಿದೆ.
Guidelines to be followed in Mosques
ಮಸೀದಿ ಆಡಳಿತ ಮಂಡಳಿ, ದರ್ಗಾ, ಸಾಮಾಜಿಕ ಕಾರ್ಯಕರ್ತರು, ಧರ್ಮ ಗುರುಗಳ ಜೊತೆ ಸುದೀರ್ಘ ಸಮಾಲೋಚನೆ ನಡೆಸಿ ಮಸೀದಿಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಮಾರ್ಗಸೂಚಿಯಲ್ಲಿ ಏನಿದೆ?
- ಮುಸ್ಲಿಂ ಬಾಂಧವರು ಸಾಧ್ಯವಾದಷ್ಟು ಮನೆಗಳಲ್ಲೇ ಕೈ-ಕಾಲು ಶುಚಿಗೊಳಿಸಿ ಮಸೀದಿಗೆ ಬರಬೇಕು
- ಮಸೀದಿಗಳಲ್ಲಿ ಕೈ-ಕಾಲು ಶುಚಿಗೊಳಿಸುವ ಕೊಳವನ್ನು ಮುಚ್ಚಬೇಕು
- ಅದರ ಬದಲು ಟ್ಯಾಪ್ ಬಳಸಬೇಕು
- ಮಸೀದಿಗಳಲ್ಲಿ ಒಂದೇ ಆಗಮನ, ನಿರ್ಗಮನ ದ್ವಾರ ಇರಬೇಕು
- ಪ್ರತಿ ಪ್ರಾರ್ಥನೆ ಮುನ್ನ ಹಾಲ್ ಅನ್ನು ಶುಚಿಗೊಳಿಸಬೇಕು
- ಮಸೀದಿಗೆ ಬರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಬೇಕು
- ಪ್ರಾರ್ಥನೆ ವೇಳೆ 1-2 ಮೀಟರ್ ಅಂತರ ಕಾಯಬೇಕು
- ಪ್ರತಿ ವ್ಯಕ್ತಿ ತನ್ನ ಸ್ವಂತ ಪ್ರಾರ್ಥನಾ ಚಾಪೆಯನ್ನು ತರಬೇಕು
- ಫರ್ಜ್ ನಮಾಜ್ನ್ನು 10-15 ನಿಮಿಷಕ್ಕೆ ಸೀಮಿತಗೊಳಿಸಬೇಕು
- ನಮಾಜ್ ಮಾಡಲು ಅತಿ ಹೆಚ್ಚು ಜನರಿದ್ದರೆ, ಎರಡು ಜಮಾತ್ ಗೆ ವ್ಯವಸ್ಥೆ ಕಲ್ಪಿಸಬೇಕು
- ಸುನ್ನತ್ ಮತ್ತು ನಫೀಸ್ ಪ್ರಾರ್ಥನೆಯನ್ನು ಮನೆಯಲ್ಲೇ ಮಾಡಬೇಕು
- ಶುಕ್ರವಾರದ ಪ್ರಾರ್ಥನೆ 15-20 ನಿಮಿಷಕ್ಕೆ ಸೀಮಿತವಾಗಿರಬೇಕು
- ಮಸೀದಿ, ದರ್ಗಾಗಳ ಬಳಿ ಭಿಕ್ಷಾಟನೆಗೆ ನಿಷೇಧ
- ಮಸೀದಿ ಬಳಿ ಪ್ರಸಾದ ಹಂಚುವುದಕ್ಕೆ ನಿರ್ಬಂಧ
- ದರ್ಗಾದಲ್ಲಿನ ಸಮಾಧಿಗಳಲ್ಲಿ ಕೂತು ಪ್ರಾರ್ಥನೆ ಮಾಡಬಾರದು
- ಆಲಿಂಗನ, ಹಸ್ತ ಲಾಘವಕ್ಕೆ ನಿರ್ಬಂಧ