ಕರ್ನಾಟಕ

karnataka

ETV Bharat / state

Bommai: ತಮಿಳುನಾಡು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಹಾಕಿದ ತಕ್ಷಣ ಕಾವೇರಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ- ಬೊಮ್ಮಾಯಿ - ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ

Cauvery River Water: ತಮಿಳುನಾಡು ರಾಜ್ಯ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಹಾಕಿದ ತಕ್ಷಣ ಕಾವೇರಿ ನದಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Basavaraja Bommai
ತಮಿಳುನಾಡು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ: ಬಸವರಾಜ ಬೊಮ್ಮಾಯಿ

By

Published : Aug 16, 2023, 4:40 PM IST

ಬೆಂಗಳೂರು:''ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡದೇ, ತಮಿಳುನಾಡು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ'' ಎಂದು ಸರ್ಕಾರದ ನಿಲುವಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

''ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲ್ಯೂಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಸರಿಯಲ್ಲ. ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ'' ಎಂದು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

''ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿದೆ. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ. ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ. ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು'' ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಸಿಎಂಗೆ ಪತ್ರ ಬರೆದಿದ್ದ ಬೊಮ್ಮಾಯಿ:ತಮಿಳುನಾಡಿಗೆ ಸೌಥ್ ವೆಸ್ಟ್ ಹಾಗೂ ನಾರ್ಥ್ ಈಸ್ಟ್ ಮಾನ್ಸೂನ್ ಮಳೆ ಆಗುತ್ತಿದೆ. ಇದರಿಂದ ಕೆಆರ್​ಎಸ್‌ನಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲವೆಂದು ಗಟ್ಟಿಯಾದ ನಿರ್ಧಾರ ತೆಗೆದುಕೊಳ್ಳುವಂತೆ ಹಾಗೂ ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಪತ್ರ ಬರೆದಿದ್ದರು.

ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪುನಃ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ನಾನು ಭಾವಿಸಿದ್ದೇನೆ. ತಮಿಳುನಾಡು ಸುಪ್ರೀಂ ಕೋರ್ಟ್​ಗೆ ಹೋಗಬಹುದೆಂದು ಮಾಧ್ಯಮಗಳಲ್ಲಿ ನಾವು ನೋಡಿದ್ದೇವೆ. ನೀರು ಹಂಚಿಕೆ ವಿಚಾರದಲ್ಲಿ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಮುಂಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದರು.

ಇದನ್ನೂ ಓದಿ:D.K.Shivakumar: ಎಲ್ಲರ ಮಾತು ಮುಗಿಯಲಿ, ನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ- ಡಿ.ಕೆ.ಶಿವಕುಮಾರ್

ABOUT THE AUTHOR

...view details