ಕರ್ನಾಟಕ

karnataka

BSY ಸಂಪುಟ ಸಚಿವರಿಗೆ ನೇಮಿಸಿದ್ದ ಸಿಬ್ಬಂದಿ, ಅಧಿಕಾರಿಗಳನ್ನು ಬಿಡುಗಡೆಗೊಳಿಸಿ ಆದೇಶ

By

Published : Aug 2, 2021, 3:29 PM IST

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಮತ್ತು ಸಚಿವರುಗಳ ಆಪ್ತ ಕಾರ್ಯದರ್ಶಿ / ವಿಶೇಷ ಕರ್ತವ್ಯಾಧಿಕಾರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎ.ಎಸ್ ಅಧಿಕಾರಿಗಳನ್ನು ಹಾಗೂ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ನಿವೃತ್ತ ಕೆ.ಎ.ಎಸ್ ಅಧಿಕಾರಿಗಳನ್ನು ಇಂದು ಮಧ್ಯಾಹ್ನದಿಂದಲೇ ಅನ್ವಯವಾಗುವಂತೆ ಅವರು ಹೊಂದಿರುವ ಹುದ್ದೆಗಳ ಕರ್ತವ್ಯದಿಂದ ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

vidhanasoudha
ವಿಧಾನಸೌಧ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿ ಅವರ ನೇತೃತ್ವದ ಸಚಿವ ಸಂಪುಟವನ್ನು ವಿಸರ್ಜನೆಗೊಳಿಸಿ ರಾಜ್ಯಪಾಲರು ಆದೇಶಿಸಿದ್ದಾರೆ.

ಹುದ್ದೆಗಳ ಕರ್ತವ್ಯದಿಂದ ಬಿಡುಗಡೆಗೊಳಿಸಿ ಸರ್ಕಾರ ಆದೇಶ

ಹೀಗಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಮತ್ತು ಸಚಿವರುಗಳ ಆಪ್ತ ಕಾರ್ಯದರ್ಶಿ / ವಿಶೇಷ ಕರ್ತವ್ಯಾಧಿಕಾರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು ಹಾಗೂ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ನಿವೃತ್ತ ಕೆ.ಎ.ಎಸ್ ಅಧಿಕಾರಿಗಳನ್ನು ಇಂದು ಮಧ್ಯಾಹ್ನದಿಂದಲೇ ಅನ್ವಯವಾಗುವಂತೆ ಅವರು ಹೊಂದಿರುವ ಹುದ್ದೆಗಳ ಕರ್ತವ್ಯದಿಂದ ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹುದ್ದೆಗಳ ಕರ್ತವ್ಯದಿಂದ ಬಿಡುಗಡೆಗೊಳಿಸಿ ಸರ್ಕಾರ ಆದೇಶ

ಅದೇ ರೀತಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಮೂವರು ನಿವೃತ್ತ ಕೆಎಎಸ್ ಅಧಿಕಾರಿಗಳನ್ನು ಸಹ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಸೇವೆಯಲ್ಲಿರುವ ಅಧಿಕಾರಿಗಳು ಕೂಡಲೇ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಕರ್ತವ್ಯದಿಂದ ಬಿಡುಗಡೆಗೊಂಡ 12 ಅಧಿಕಾರಿಗಳ ಹೆಸರು ಮತ್ತು ಹುದ್ದೆಗಳ ಮಾಹಿತಿಯನ್ನು ಸಂಬಂಧಿಸಿದವರಿಗೆ ತಿಳಿಸಲಾಗಿದೆ.

ಓದಿ:ಸಂಪುಟ ರಚನೆ ಸರ್ಕಸ್: ದಿಲ್ಲಿಯಲ್ಲಿ ಬಿ ಎಲ್​ ಸಂತೋಷ್ ಜೊತೆ ಬೊಮ್ಮಾಯಿ ಮಾತುಕತೆ

ABOUT THE AUTHOR

...view details