ಕರ್ನಾಟಕ

karnataka

ETV Bharat / state

ಸಿಎಂ ಯಡಿಯೂರಪ್ಪಗೆ ಹೆಚ್​ಡಿ ಕುಮಾರಸ್ವಾಮಿ ಮಾಡಿದ ಮನವಿ ಏನು? - ಹೆಚ್​ಡಿ ಕುಮಾರಸ್ವಾಮಿ ಮನವಿ ಸುದ್ದಿ,

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೇ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪರಿಗೆ ಹೆಚ್​ಡಿಕೆ ಮನವಿ ಮಾಡಿಕೊಂಡಿದ್ದಾರೆ.

HD Kumaraswamy request to CM Yediyurappa, HD Kumaraswamy request to CM Yediyurappa news, CM Yediyurappa news, HD Kumaraswamy request, HD Kumaraswamy request news, ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ ಕುಮಾರಸ್ವಾಮಿ ಸುದ್ದಿ, ಸಿಎಂ ಯಡಿಯೂರಪ್ಪ ಸುದ್ದಿ, ಹೆಚ್​ಡಿ ಕುಮಾರಸ್ವಾಮಿ ಮನವಿ, ಹೆಚ್​ಡಿ ಕುಮಾರಸ್ವಾಮಿ ಮನವಿ ಸುದ್ದಿ,
ಸಿಎಂ ಯಡಿಯೂರಪ್ಪಗೆ ಹೆಚ್​ಡಿ ಕುಮಾರಸ್ವಾಮಿ ಮನವಿ ಮಾಡಿದ್ದೇನು

By

Published : Aug 25, 2020, 2:04 PM IST

ಬೆಂಗಳೂರು : ಹಿಂದಿನ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೇ ಬಿಡುಗಡೆ ಮಾಡುವಂತೆ ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಎಲ್ಲ ಶಾಸಕರಿಗೆ ನೀಡಲಾಗಿದ್ದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡುವ ಮೂಲಕ ಔದಾರ್ಯ ಪ್ರದರ್ಶಿಸುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಧ್ಯಮ ಪ್ರಕಟಣೆಯಲ್ಲಿ ಮಾಜಿ ಸಿಎಂ ಕೋರಿದ್ದಾರೆ.

ಕೊರೊನಾ ಸಂಕಷ್ಟ ಸಮಯದಲ್ಲಿ ಹಾಗೂ ಲಾಕ್​ಡೌನ್ ನಂತರ ಜನಜೀವನ ತತ್ತರಗೊಂಡಿದೆ. ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಈ ಪರಿಸ್ಥಿತಿಯನ್ನು ಮನಗಂಡು ಮುಖ್ಯಮಂತ್ರಿಗಳು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಮೂಲಕ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆರ್ಥಿಕ ಸಂಪನ್ಮೂಲ ಸರಿದೂಗಿಸಿಕೊಂಡು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

ABOUT THE AUTHOR

...view details