ಕರ್ನಾಟಕ

karnataka

ETV Bharat / state

ಯತ್ನಾಳ್ ಟೀಂ ವಿರುದ್ಧ ಹೈಕಮಾಂಡ್​ಗೆ ದೂರು ನೀಡಲು ರೇಣುಕಾಚಾರ್ಯ ತಂಡ ಸಜ್ಜು; ಜು. 21ಕ್ಕೆ ದೆಹಲಿ ಯಾತ್ರೆ!

ಮೇಲಿಂದ ಮೇಲೆ ಮುಖ್ಯಮಂತ್ರಿ ಬಿಎಸ್​​ವೈ ಹಾಗೂ ರಾಜ್ಯ ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ವಿಚಾರವಾಗಿ ವಾಗ್ದಾಳಿ ನಡೆಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಂಡದ ವಿರುದ್ಧ ಹೈಕಮಾಂಡ್​ಗೆ ದೂರು ನೀಡಲು ಇದೀಗ ರೇಣುಕಾಚಾರ್ಯ ತಂಡ ಸಜ್ಜಾಗಿದೆ.

Renukacharya
Renukacharya

By

Published : Jul 15, 2021, 2:02 AM IST

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತ ಶಾಸಕರ ನಿಯೋಗ ಇದೀಗ ಹೈಕಮಾಂಡ್ ಕದ ತಟ್ಟಲು ಸಿದ್ಧವಾಗಿದೆ. ಮೇಲಿಂದ ಮೇಲೆ ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.

ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡುವವರ ವಿರುದ್ಧ ಕಿಡಿಕಾರುತ್ತಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ನಾಯಕತ್ವ ಬದಲಾವಣೆ ಮಾಡದಂತೆ ಶಾಸಕರ ಸಹಿ ಸಂಗ್ರಹ ಮಾಡಿದೆ. ಇದೀಗ ಶಾಸಕರ ನಿಯೋಗದೊಂದಿಗೆ ದೆಹಲಿಗೆ ತೆರಳಿ ವರಿಷ್ಠರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ, ಲಭ್ಯವಾಗಿರುವ ಮಾಹಿತಿ ಪ್ರಕಾರ ಜುಲೈ 21ರಂದು ರೇಣುಕಾಚಾರ್ಯ ನೇತೃತ್ವದಲ್ಲಿ ಶಾಸಕರ ನಿಯೋಗ ನವದೆಹಲಿಗೆ ಪ್ರಯಾಣ ಬೆಳೆಸಲಿದೆ.

ಇದನ್ನೂ ಓದಿರಿ: ಕಾಲೇಜು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭ... ಜು.16ಕ್ಕೆ ತಾತ್ಕಾಲಿಕ ಪಟ್ಟಿ ಪ್ರಕಟ

ಸಿಎಂ ಬಿಎಸ್​ವೈ ವಿರುದ್ಧ ಅನಗತ್ಯವಾಗಿ ಹೇಳಿಕೆಗಳನ್ನು ನೀಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕಮಾಂಡ್​ಗೆ ಮನವಿ ಮಾಡಲಿದೆ ಎಂದು ತಿಳಿದು ಬಂದಿದೆ. ಯಡಿಯೂರಪ್ಪ ನಾಯಕತ್ವದ ಪರ ಸಂಗ್ರಹ ಮಾಡಿರುವ ಶಾಸಕರ ಸಹಿಯುಳ್ಳ ಪತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ನೀಡಲಿದ್ದು, ನಾಯಕತ್ವದ ವಿರುದ್ಧ ಮಾತನಾಡುವವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.

ಪೂರ್ವಾನುಮತಿ ಪಡೆದ ನಿಯೋಗ: ಹೈಕಮಾಂಡ್ ನಾಯಕರ ಪೂರ್ವಾನುಮತಿ ಇಲ್ಲದೆ ಬಿಜೆಪಿಯ ಯಾವ ಶಾಸಕರು ದೆಹಲಿಗೆ ಬರುವಂತಿಲ್ಲ. ದೆಹಲಿಗೆ ಬಂದು ನಾಯಕರ ಭೇಟಿಗೆ ಅನುಮತಿ ಪಡೆದುಕೊಳ್ಳುವ ಪ್ರಯತ್ನ ನಡೆಸಬಾರದು ಎಂದು ಈಗಾಗಲೇ ರಾಜ್ಯದ‌ ಶಾಸಕರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಲಾಗಿದೆ. ಹಾಗಾಗಿ ವರಿಷ್ಠರ ಭೇಟಿಗೆ ರೇಣುಕಾಚಾರ್ಯ ನೇತೃತ್ವದ ಶಾಸಕರ ನಿಯೋಗ ಅನುಮತಿ ಪಡೆದುಕೊಂಡಿದೆ. ಜುಲೈ 21ರಂದು ವರಿಷ್ಠರು ಸಮಯ ನೀಡಿದ್ದಾರೆಂದು ತಿಳಿದು ಬಂದಿದೆ.

ABOUT THE AUTHOR

...view details