ಕರ್ನಾಟಕ

karnataka

ETV Bharat / state

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಶಾಸಕ ರೇಣುಕಾಚಾರ್ಯಗೆ ಬಂಪರ್​ - ಸಂಪುಟ ದರ್ಜೆಯ ಸ್ಥಾನಮಾನ

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ ನೇಮಕ...

By

Published : Sep 6, 2019, 9:44 PM IST

ಬೆಂಗಳೂರು:ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಈಗ ಅದೃಷ್ಟ ಖುಲಾಯಿಸಿದೆ. ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ ನೇಮಕ

ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.

ಇತ್ತೀಚೆಗಷ್ಟೇ ಯಲಹಂಕ‌ ಶಾಸಕ ಎಸ್.ಆರ್. ವಿಶ್ವನಾಥ್ ಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿತ್ತು. ಅದರ ಬೆನ್ನಲ್ಲೇ ಇದೀಗ ರೇಣುಕಾಚಾರ್ಯಗೂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.

ABOUT THE AUTHOR

...view details