ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ನೀವು (ಯತ್ನಾಳ್) ಇದೇ ರೀತಿ ಮಾತನಾಡಿದರೆ ರಾಜ್ಯದ ಜನತೆ ನಿಮ್ಮನ್ನು ಕಾಮಿಡಿ ಪೀಸ್ ರೀತಿ ನೋಡುತ್ತಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಂಜೆ ಮಾತನಾಡಿದ ಅವರು, ಆರ್‌ಜೆಡಿ ಹಾಗೂ ಕಾಂಗ್ರೆಸ್ಗೆ ಬಿಹಾರ ಚುನಾವಣೆಯಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಹಣ ನೀಡಿದ್ದಾರೆ ಎಂದು ಯತ್ನಾಳ್ ಅವರು ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.