ಬೆಂಗಳೂರು: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಬಿಎಸ್‌ವೈ ಆಪ್ತ ಶಾಸಕರಾದ ರೇಣುಕಾಚಾರ್ಯ ಹಾಗೂ ರಾಜುಗೌಡ ತಮ್ಮ ನಾಯಕರಾದ ಯಡಿಯೂರಪ್ಪ ಮುಂದೆ ಕಣ್ಣೀರು ಹಾಕಿದ್ದಾರೆ. ಪಕ್ಷ ವಿರೋಧಿಗಳ ವಿರುದ್ಧ ಹೋರಾಟ ಮಾಡಿದ್ದೇ ತಪ್ಪಾ ಎಂದು ಪ್ರಶ್ನಿಸಿ ಭಾವುಕರಾಗಿದ್ದಾರೆ ಎನ್ನಲಾಗಿದೆ.
ಸಿಎಂ ದೂರವಾಣಿ ನಿರೀಕ್ಷೆಯಲ್ಲಿದ್ದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಸುರಪುರ ಶಾಸಕ ರಾಜುಗೌಡ ಕರೆ ಬಾರದ ಹಿನ್ನೆಲೆ ಬಿಎಸ್‌ವೈ ಕಾವೇರಿ ನಿವಾಸಕ್ಕೆ ಆಗಮಿಸಿದ್ದರು.