ಬೆಂಗಳೂರು: ಗೃಹ ಸಚಿವರ ರಾಜೀನಾಮೆ ಕೇಳಲು ಕಾಂಗ್ರೆಸ್ ಪಕ್ಷದವರಿಗೆ ನೈತಿಕ ಹಕ್ಕಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಯುವಕನ ಹತ್ಯೆಯಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಯಾರು ಇದನ್ನು ಮಾಡಿದ್ದಾರೆ ಅಂತ ಗೊತ್ತಿದೆ. ಪ್ರಕರಣ ತನಿಖೆ ಹಂತದಲ್ಲಿ ಇದೆ ಎಂದರು.