ಬೆಂಗಳೂರು:ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ರೇಣುಕಾಚಾರ್ಯ ಪೊಲೀಸ್ ಕಸ್ಟಡಿಗೆ - ರೇಣುಕಾಚಾರ್ಯ
ಸಮನ್ಸ್ ನೀಡಿದರೂ ಉತ್ತರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ರೇಣುಕಾಚಾರ್ಯ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಆದೇಶ ಹೊರಡಿಸಿದ್ದಾರೆ.
2016 ರಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅನೇಕ ಬಾರಿ ಸಮನ್ಸ್ ನೀಡಿದರೂ ಉತ್ತರಿಸಿದ ಕಾರಣ ರೇಣುಕಾಚಾರ್ಯ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಆದೇಶ ಹೊರಡಿಸಿದ್ದಾರೆ.
ಇಂದು ತಮ್ಮ ಎನ್ಬಿಡಬ್ಲೂ (Non-Bailable Warrant-Recall) ಮಾಡಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದ ರೇಣುಕಾಚಾರ್ಯರನ್ನು ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದ್ದು, ಇಂದು ಸಂಜೆ ತನಕ ರೇಣುಕಾಚಾರ್ಯ ಕೋರ್ಟ್ನಲ್ಲೇ ಇರಬೇಕಾಗಬಹುದು ಎನ್ನಲಾಗುತ್ತಿದೆ.