ಬೆಂಗಳೂರು: ನನ್ನ ಸರ್ಕಾರಿ ಅಧಿಕೃತ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಇಂದಿನಿಂದ ಶುಕ್ರವಾರ ಸಂಜೆವರೆಗೂ ಸರ್ಕಾರಿ ಗೃಹ ಕಚೇರಿಯಲ್ಲಿಯೇ ಕಾರ್ಯನಿರ್ವಹಿಸಲಿದ್ದೇನೆ ಎಂದು ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.
ರೇಣುಕಾಚಾರ್ಯ ಕಚೇರಿ ಸಿಬ್ಬಂದಿಗೆ ಕೊರೊನಾ.. ಆಫೀಸ್‌ಗೆ ಬದಲು ಫೋನ್‌ನಲ್ಲೇ ಸಂಪರ್ಕಿಸಲು ಮನವಿ
ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಕಚೇರಿಯ ಆಪ್ತ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಕಾಲು ನೋವಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಜುಲೈ 6ರಂದು ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು..
ಶಾಸಕ ರೇಣುಕಾಚಾರ್ಯ
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರು, ಹಿತೈಷಿಗಳು ನೇರವಾಗಿ ಬಂದು ಭೇಟಿಯಾಗದೆ, ದೂರವಾಣಿ ಮೂಲಕ ಸಂಪರ್ಕಿಸಬೇಕೆಂದು ವಿನಂತಿಸಿದ್ದಾರೆ. ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಕಚೇರಿಯ ಆಪ್ತ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಕಾಲು ನೋವಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಜುಲೈ 6ರಂದು ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಇದರಿಂದ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ.