ಬೆಂಗಳೂರು: ನಗರದಲ್ಲಿಂದು ನಿನ್ನೆಗಿಂತ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನಿನ್ನೆ 597 ಜನರಲ್ಲಿ ಕಾಣಿಸಿಕೊಂಡಿದ್ದ ಸೋಂಕು ಇಂದು 729 ಜನರಲ್ಲಿ ಪತ್ತೆಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕೊಂಚ ಏರಿಕೆ: ಇಂದು 729 ಮಂದಿಗೆ ಸೋಂಕು - Bangalore news
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಕುರಿತ ವರದಿ ಇಲ್ಲಿದೆ.
ಕೋವಿಡ್ ಪ್ರಕರಣ
942 ಮಂದಿ ಆಸ್ಪತ್ರೆಗಳಿಂದ ಇಂದು ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3,58,606ಕ್ಕೆ ಏರಿಕೆಯಾಗಿದ್ದು, ಈವರೆಗೆ 3,36,880 ಮಂದಿ ಬಿಡುಗಡೆಯಾಗಿದ್ದಾರೆ. 17,707 ಸಕ್ರಿಯ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಮೃತಟ್ಟವರ ಸಂಖ್ಯೆ 4,018ಕ್ಕೆ ಏರಿಕೆಯಾಗಿದೆ. 338 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.