ಬೆಂಗಳೂರು:ಲಾಕ್ಡೌನ್ ಬಳಿಕ ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಮತ್ತು ಅದರೊಂದಿಗೆ ಸರ್ಕಾರ ಬಾಕಿ ಉಳಿಸಿಕೊಂಡಿರುವ ಶಿಕ್ಷಣ ಸಂಸ್ಥೆಗಳ ಆರ್ಟಿಇ ಹಣವನ್ನು ತುರ್ತಾಗಿ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಅನುದಾನ ರಹಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಕೋರಿ ಸಿಎಂಗೆ ಮನವಿ - Request CM to seek special package
ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಕರ್ನಾಟಕ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅನುದಾನ ರಹಿತ ಶಾಲಾ-ಕಾಲೇಜುಗಳ ಶಿಕ್ಷಕರ ಅನುಕೂಲಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಲಿಖಿತ ಮನವಿ ಸಲ್ಲಿಸಿದೆ.
ಈ ಕುರಿತು ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಕರ್ನಾಟಕ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲಿಖಿತ ಮನವಿ ಸಲ್ಲಿಸಿದೆ. ಸಂಘ ಸಲ್ಲಿಸಿರುವ ಮನವಿಯಲ್ಲಿ ಸರ್ಕಾರ ಈಗಾಗಲೇ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಅದೇ ರೀತಿ ಅನುದಾನ ರಹಿತ ಶಾಲಾ-ಕಾಲೇಜುಗಳ ಶಿಕ್ಷಕರ ಅನುಕೂಲಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕೋರಲಾಗಿದೆ.
ಲಾಕ್ಡೌನ್ ಜಾರಿ ಮಾಡಿದ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಗಳು, ಅದರಲ್ಲೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದು, ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಸಂಬಳ ನೀಡಲು ತೊಂದರೆಯಾಗಿದೆ. ಇದರಿಂದಾಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಕಳೆದೆರಡು ತಿಂಗಳಿಂದ ಸಂಬಳ ಸಿಗದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆಯೇ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಕೂಡ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ ಮಾಡಲಾಗಿದೆ.