ಬೆಂಗಳೂರು: ಸರ್ಕಾರದಿಂದ ನಗರದ ವಿವಿಧ ಭಾಗಗಳಲ್ಲಿ ಕೈಗೆತ್ತಿಕೊಂಡಿರುವ ಎಲಿವೇಟೆಡ್ ಕಾರಿಡಾರ್ ಯೋಜನೆಗಳನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ವಿವಿಧ ನಾಗರಿಕ ಕ್ಷೇಮಾಭಿವೃದ್ಧಿ ಸಂಘಟನೆಗಳು ಡಿಸಿಎಂ ಪರಮೇಶ್ವರ್ಗೆ ಮನವಿ ಮಾಡಿದ್ದಾರೆ.
ರಸ್ತೆ ಕಾಮಗಾರಿಗಳನ್ನು ನಿರ್ದಿಷ್ಟ ಸಮಯದಲ್ಲಿ ಮುಗಿಸುವಂತೆ ಡಿಸಿಎಂಗೆ ಮನವಿ - ಸರ್ಕಾರ
20ಕ್ಕೂ ಹೆಚ್ಚು ಸಂಸ್ಥೆಗಳ ಪ್ರತಿನಿಧಿಗಳು, ನಗರದ ಟ್ರಾಫಿಕ್ ಜಾಂ ಸಮಸ್ಯೆ ಬಗ್ಗೆ ಡಿಸಿಎಂ ಗಮನಕ್ಕೆ ತಂದಿದ್ದಲ್ಲದೆ, ಜನರ ಸಮಸ್ಯೆ ಪರಿಹಾರಕ್ಕೆ ಸಮಯದ ಮಿತಿಯೊಳಗೆ ಕಾಮಗಾರಿಗಳನ್ನು ಮುಗಿಸುವಂತೆ ಮನವಿ ಪತ್ರ ಸಲ್ಲಿಸಿದರು.
ಡಿಸಿಎಂ ಪರಮೇಶ್ವರ್ಗೆ ಮನವಿ
20ಕ್ಕೂ ಹೆಚ್ಚು ಸಂಸ್ಥೆಗಳ ಪ್ರತಿನಿಧಿಗಳು, ನಗರದ ಟ್ರಾಫಿಕ್ ಜಾಂ ಸಮಸ್ಯೆ ಬಗ್ಗೆ ಡಿಸಿಎಂ ಗಮನಕ್ಕೆ ತಂದಿದ್ದಲ್ಲದೆ, ಜನರ ಸಮಸ್ಯೆ ಪರಿಹಾರಕ್ಕೆ ಸಮಯದ ಮಿತಿಯೊಳಗೆ ಕಾಮಗಾರಿಗಳನ್ನು ಮುಗಿಸುವಂತೆ ಮನವಿ ಪತ್ರ ಸಲ್ಲಿಸಿದರು.
ಅಷ್ಟೇ ಅಲ್ಲದೆ, ಸರ್ಕಾರದ ಯಾವುದೇ ಕಾಮಗಾರಿ ಜಾರಿಗೊಳಿಸುವ ಮೊದಲು ಅದರ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸಿದರೆ ಯಾವುದೇ ರೀತಿಯ ಗೊಂದಲಗಳು ಸೃಷ್ಟಿಯಾಗುವುದಿಲ್ಲ. ಹೀಗಾಗಿ ಪ್ರತಿಯೊಂದು ಯೋಜನೆಯ ವಿಸ್ತೃತ ಯೋಜನಾ ವರದಿ, ಅನುಕೂಲಗಳು ಹಾಗೂ ಅನಾನುಕೂಲಗಳ ಕುರಿತು ಮಾಹಿತಿ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ.