ಬೆಂಗಳೂರು:ವಿವಿಧ ಸಮುದಾಯಗಳಿಂದ ಮೀಸಲಾತಿ ಬೇಡಿಕೆ ವಿಚಾರವಾಗಿ ಇಂದು ಸಂಜೆ ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಮೀಸಲಾತಿ ಬೇಡಿಕೆ: ಕಾನೂನು ತಜ್ಞರ ಜತೆ ಇಂದು ಸಂಜೆ ಬೊಮ್ಮಾಯಿ ಸಭೆ - meeting this evening with legal experts
ಕೆ.ಕೆ.ಗೆಸ್ಟ್ ಹೌಸ್ನಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ದೇಶದಲ್ಲಿ ಮೀಸಲಾತಿ ಪ್ರಮಾಣ ಏರಿಕೆ ಮಾಡುವ ವಿಚಾರವಾಗಿ ಸುಪ್ರೀಂ ಕೋರ್ಟ್ನಿಂದ ರಾಜ್ಯಗಳಿಗೆ ನೊಟೀಸ್ ಜಾರಿ ಮಾಡಿರುವ ಹಿನ್ನೆಲೆ ಸುಪ್ರೀಂ ಕೋರ್ಟ್ಗೆ ರಾಜ್ಯದ ಅಭಿಪ್ರಾಯ ತಿಳಿಸಲು ಕರ್ನಾಟಕ ಮುಂದಾಗಿದೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಮಾಜಿ ಅಡ್ವೋಕೇಟ್ ಜನರಲ್ಗಳು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಮೀಸಲಾತಿ ಸಂಬಂಧ ಮಹತ್ವದ ಚರ್ಚೆ ನಡೆಯಲಿದೆ.
ಕೆ.ಕೆ.ಗೆಸ್ಟ್ ಹೌಸ್ನಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ದೇಶದಲ್ಲಿ ಮೀಸಲಾತಿ ಪ್ರಮಾಣ ಏರಿಕೆ ಮಾಡುವ ವಿಚಾರವಾಗಿ ಸುಪ್ರೀಂ ಕೋರ್ಟ್ನಿಂದ ರಾಜ್ಯಗಳಿಗೆ ನೊಟೀಸ್ ಜಾರಿ ಮಾಡಿರುವ ಹಿನ್ನೆಲೆ ಸುಪ್ರೀಂ ಕೋರ್ಟ್ಗೆ ರಾಜ್ಯದ ಅಭಿಪ್ರಾಯ ತಿಳಿಸಲು ಕರ್ನಾಟಕ ಮುಂದಾಗಿದೆ.
ಮೀಸಲಾತಿ ಪ್ರಮಾಣ ಶೇ. 50ಕ್ಕಿಂತ ಹೆಚ್ಚು ಮಾಡುವ ಬಗ್ಗೆ ಕರ್ನಾಟಕ ತನ್ನ ಅಭಿಪ್ರಾಯ ತಿಳಿಸಬೇಕಾಗಿದೆ. ಈ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಮೀಸಲಾತಿ ಬೇಡಿಕೆಗಳ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಿದ್ದಾರೆ.