ಬೆಂಗಳೂರು :ಸರ್ಕಾರದ ಪ್ರಾಧಿಕಾರಗಳು ಹಾಗೂ ನಿಗಮ ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಅಗತ್ಯ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕೊನೆಯದಾಗಿ 4 ವಾರ ಕಾಲಾವಕಾಶ ನೀಡಿದೆ.
ಈ ಕುರಿತು ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲಾ ವರ್ಗಗಳಲ್ಲಿ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಪ್ರಕಟಿಸಿದೆ.