ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ನಿಯಂತ್ರಣಕ್ಕೆ ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದೆ. ಮತ್ತೊಂದೆಡೆ ರಾಜ್ಯದಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ಮೊದಲ ಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಷಯ ಹೊರಬಿದ್ದಿದೆ.
ತೀವ್ರ ಉಸಿರಾಟ ತೊಂದರೆ ಹೊಂದಿರುವ ರೋಗಿಗೆ ಎಸ್ಎಆರ್ಐ(SARI) ಎಂದು ಹೇಳಲಾಗುತ್ತದೆ. ಈ ಪ್ರಕರಣಗಳು ನಗರದಲ್ಲೇ ಅಧಿಕವಾಗಿದ್ದು, ಏ.07ರಿಂದ ದಿನಕ್ಕೆ ಒಂದರಿಂದ ಎರಡು ಪ್ರಕರಣಗಳು ದಾಖಲಾಗುತ್ತಿವೆಯಂತೆ. ಕೊರೊನಾ ಸೋಂಕು ಹೆಚ್ಚಾದಾಗ ಈ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳತ್ತದೆ. ಇನ್ನು, ಆರೋಗ್ಯ ಇಲಾಖೆಯ ವರದಿ ಪ್ರಕಾರ ಸುಮಾರು 26 ಕೇಸ್ಗಳು ದಾಖಲಾಗಿವೆ.