ಕರ್ನಾಟಕ

karnataka

ETV Bharat / state

ಉತ್ತರದಾಯಿತ್ವ ಇರುವ ಅಧಿಕಾರಿ ವರ್ಗ ಜನಪ್ರತಿನಿಧಿಗಳು ಇಂದು ದೇಶಕ್ಕೆ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ - ಸಿಎಂ ಸಿದ್ದರಾಮಯ್ಯ

ತಾರತಮ್ಯ ಅಳಿಸಬೇಕು. ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್​​ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ: ಯುಪಿಎಸ್​ಸಿ ಸಾಧಕ ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

Congratulation Program for UPSC Passed Candidates
ಯುಪಿಎಸ್​​ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ

By

Published : Jun 18, 2023, 4:31 PM IST

ಬೆಂಗಳೂರು: ಉತ್ತರದಾಯಿತ್ವ ಇರುವ ಅಧಿಕಾರಿ ವರ್ಗ, ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಿನ ಅಗತ್ಯವಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಈ ಸ್ಥಾನದಲ್ಲಿ, ಈ ಹುದ್ದೆಯಲ್ಲಿರಲು ಅನರ್ಹರು ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.‌

ಇನ್ ಸೈಟ್ ಐಎಎಸ್ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್​​ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲಿರುತ್ತದೆ ಎಂದು ತಿಳಿಸಿದರು.

ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:IIT ಪ್ರವೇಶ ಪರೀಕ್ಷೆಯ JEE-Advanced ಫಲಿತಾಂಶ ಪ್ರಕಟ: ವಾವಿಲಾಲ ಚಿದ್ವಿಲಾ ರೆಡ್ಡಿಗೆ ಫಸ್ಟ್‌ ರ‍್ಯಾಂಕ್

ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತೆ:ಈ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆ ಮಾತನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು ಎಂದು ಸಿಎಂ ಸ್ಮರಿಸಿದರು. ಈ ಎಚ್ಚರಿಕೆ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು. ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ ಎಂದರು.

ಇದನ್ನೂಓದಿ:Cyclone Biparjoy: ರಾಜಸ್ಥಾನದಲ್ಲಿ ಬಿಪರ್​ಜೋಯ್​​ ಚಂಡಮಾರುತದಿಂದ ಭಾರಿ ಮಳೆ, ಜನಜೀವನಕ್ಕೆ ಬರೆ- ವಿಡಿಯೋ

ಜಾತಿ ವ್ಯವಸ್ಥೆ ಅಳಿಸುವ ಕೆಲಸ ಆಗಲಿ:ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಅಪಾರ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಶಿಕ್ಷಣದ ಜತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್​ಸಿಯಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಸಿಎಂ ಸಲಹೆ ನೀಡಿದರು.

ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್​ಗಳಾಗಿ ಮಾಡಿ ಎಂದು ಇನ್ ಸೈಟ್ ಸಂಸ್ಥೆಗೆ ಕಿವಿಮಾತು ಹೇಳಿದರು.
ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಇನ್ ಸೈಟ್ ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಹಾಗೂ ಮಧುಕರ್ ನಾಗಣ್ಣ ಅವರು ಉಪಸ್ಥಿತರಿದ್ದು, ಯುಪಿಎಸ್ ಸಿ ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ:Election Code of Conduct: ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ: 200 ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್​ ದಾಖಲಿಸಿದ ಚುನಾವಣಾ ಆಯೋಗ

ABOUT THE AUTHOR

...view details