ಕರ್ನಾಟಕ

karnataka

ETV Bharat / state

ಕೆಲವು ಖಾತೆಗಳನ್ನು ನಿರ್ಬಂಧಿಸುವ ವಿಚಾರ: ಎಕ್ಸ್ ಕಾರ್ಪ್ ಮೇಲ್ಮನವಿ ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್ - ಕೆಲವು ಖಾತೆಗಳಿಗೆ ನಿರ್ಬಂಧ

ಕೆಲವು ಟಿಟ್ಟರ್​ ಖಾತೆಗಳಿನ್ನು ನಿರ್ಬಂಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎಕ್ಸ್ ಕಾರ್ಪ್ ಸಲ್ಲಿಕೆ ಮಾಡಿದ ಮೇಲ್ಮನವಿ ಅರ್ಜಿ ವಿಚಾರಣೆಗೆ ಹೈಕೋರ್ಟ್ ಸಮ್ಮತಿಸಿದೆ.

High Court
ಹೈಕೋರ್ಟ್

By ETV Bharat Karnataka Team

Published : Oct 4, 2023, 7:45 PM IST

ಬೆಂಗಳೂರು:ಆಕ್ಷೇಪಾರ್ಹ ಪೋಸ್ಟ್ ಪ್ರಕಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವೈಯಕ್ತಿಕ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲು ಎಕ್ಸ್ ಕಾರ್ಪ್ (ಹಿಂದಿನ ಟ್ವಿಟರ್) ಕಂಪನಿಗೆ ಸೂಚಿಸಿರುವ ಆದೇಶವನ್ನು ಮರು ಪರಿಶೀಲನೆ ನಡೆಸಲು ಕಾರಣಗಳಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಹೈಕೋರ್ಟ್ ಅಂಗೀಕರಿಸಿದೆ.

ಖಾತೆಗಳನ್ನು ನಿರ್ಬಂಧಿಸಲು ಸೂಚಿಸಿ 2021 ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶ ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್ ಸಂಸ್ಥೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆಗೆ ಅಂಗೀಕರಿಸಿದ್ದು, ನವೆಂಬರ್ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ.

ವಿಚಾರಣೆ ವೇಳೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಪರ ವಕೀಲರು ಹಾಜರಾಗಿ, ನಿರ್ಬಂಧ ಆದೇಶವನ್ನು ಪರಿಶೀಲನೆ ನಡೆಸುವ ಕುರಿತು ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸೆ.20ರಂದು ನ್ಯಾಯಾಲಯ ಸೂಚಿಸಿತ್ತು. ಆದರೆ, ನಿರ್ಬಂಧ ಆದೇಶವನ್ನು ಮರು ಪರಿಶೀಲನೆ ನಡೆಸಲು ಸಾಧ್ಯವಾಗುವುದಿಲ್ಲ. ಆದೇಶ ಮರುಪರಿಶೀಲಿಸಲು ಯಾವುದೇ ಸಕಾರಣಗಳು ಇಲ್ಲವಾಗಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಕರಣದ ಹಿನ್ನೆಲೆ ಏನು?:ಕೆಲ ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಎಕ್ಸ್ ಕಾರ್ಪ್(ಟ್ವಿಟರ್) ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿ 50 ಲಕ್ಷ ರೂ. ದಂಡ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಸಂಬಂಧ ಹಿಂದೆ ವಿಚಾರಣೆ ನಡೆಸಿದ್ದ ಮತ್ತೊಂದು ವಿಭಾಗೀಯ ಪೀಠ, 50 ಲಕ್ಷ ರೂ. ದಂಡ ವಿಧಿಸಿದ ಆದೇಶಕ್ಕೆ ತಡೆ ನೀಡಿತ್ತು. ಕೇಂದ್ರ ಸರ್ಕಾರದ ಆದೇಶ ಪಾಲಿಸುವ ಬಗ್ಗೆ ಎಕ್ಸ್ ಕಾರ್ಪ್ ತನ್ನ ನಂಬಿಕೆ ಉಳಿಸಿಕೊಳ್ಳುವುದಕ್ಕಾಗಿ ದಂಡದ ಒಟ್ಟು ಮೊತ್ತದಲ್ಲಿ ಶೇ. ೫೦ರಷ್ಟು (25 ಲಕ್ಷ ರೂ.) ಅನ್ನು ನ್ಯಾಯಾಲಯಕ್ಕೆ ಠೇವಣಿ ಇಡಬೇಕೆಂದು ನಿರ್ದೇಶಿಸಿತ್ತು. ಅದರಂತೆ ಎಕ್ಸ್ ಕಾರ್ಪ್ 25 ಲಕ್ಷ ರೂ. ಠೇವಣಿಯಿಟ್ಟಿತ್ತು.

ಇದನ್ನೂ ಓದಿ:ಬೆಂಗಳೂರು ನಗರದ ಶೌಚಾಲಯಗಳ ಕುರಿತು ವರದಿ ಸಲ್ಲಿಸದ ಸರ್ಕಾರ : ಐದು ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

ABOUT THE AUTHOR

...view details