ಬೆಂಗಳೂರು:7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ 74 ವರ್ಷದ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಅವರನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಶಿವಾಜಿನಗರ ವ್ಯಾಪ್ತಿಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಿದ್ದು, ಅದೇ ಕಟ್ಟಡದ ಒಂದು ಭಾಗದಲ್ಲಿ ಬಾಲಕಿಯ ಕುಟುಂಬ ವಾಸವಿತ್ತು. ಭಾನುವಾರ ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ನೋವಿನಿಂದ ಬಳಲುತ್ತಿದ್ದುದನ್ನು ಕುಟುಂಬದವರು ಗಮನಿಸಿದಾಗ ಆರೋಪಿಯ ಕೃತ್ಯ ಬಯಲಾಗಿದೆ.
ತಕ್ಷಣ ನೊಂದ ಬಾಲಕಿಯ ಕುಟುಂಬಸ್ಥರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಬಾಲಕಿಯ ಕಡೆಯವರು, ಅಕ್ಕಪಕ್ಕದ ನಿವಾಸಿಗಳು ಆರೋಪಿಯ ಮನೆ ಮುಂದೆ ಜಮಾಯಿಸಿದ್ದು, ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಪ್ರಕರಣ ದಾಖಲಿಸಿಕೊಂಡ ಶಿವಾಜಿನಗರ ಠಾಣಾ ಪೊಲೀಸರು ಪೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:Pregnant Raped: ಹೆರಿಗೆಗೆ ಬಂದ ಏಳು ತಿಂಗಳ ಗರ್ಭಿಣಿ ಸಹೋದರಿ ಮೇಲೆ ಇಬ್ಬರು ಸಹೋದರರಿಂದ ಅತ್ಯಾಚಾರ
ಪ್ರತ್ಯೇಕ ಪ್ರಕರಣ- ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ - ಮೂರು ವರ್ಷ ಶಿಕ್ಷೆ: ಇತ್ತೀಚೆಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2015ರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯಿಂದ ಚಿನ್ನಾಭರಣ ಪಡೆದ ಪ್ರಕರಣದ ಅಪರಾಧಿಗೆ ಸಂಬಂಧಿಸಿದಂತೆ ಮೂರು ವರ್ಷ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಜಪ್ಪಿನಮೊಗರು ಕಜೆಕಾರ್ ನಿವಾಸಿ ರೋಶನ್ ಡಿಸೋಜ ಆಲಿಯಾಸ್ ರೋಶನ್ ಫರ್ನಾಂಡಿಸ್ (31) ಶಿಕ್ಷೆಗೊಳಗಾದ ವ್ಯಕ್ತಿ.