ಬೆಂಗಳೂರು: ನಗರದ ಹಲವೆಡೆ ಸ್ಮಾರ್ಟ್ ಸಿಟಿ ಯೋಜನೆಯ ರಸ್ತೆ ಕಾಮಗಾರಿಗಳು ಬಿರುಸಿನಿಂದ ನಡೆಯುತ್ತಿವೆ. ಮಳೆಗಾಲಕ್ಕೂ ಮೊದಲು ಕಾಮಗಾರಿ ಮುಗಿಸಬೇಕಾದ ಗಡುವಿದ್ದರೂ, ಲಾಕ್ಡೌನ್ ಪರಿಣಾಮ ಕೆಲಸ ಕಾರ್ಯಗಳು ನಿಧಾನಗೊಂಡಿವೆ.
ಇಂದು ಸಿಎಂ ಯಡಿಯೂರಪ್ಪ ಇಂದು ನಗರ ಪ್ರದಕ್ಷಿಣೆ ನಡೆಸಿ ಕಾಮಗಾರಿಗಳು ಹಾಗೂ ಸ್ಮಾರ್ಟ್ ಸಿಟಿ ಯೋಜನೆಯ ಕೆಲಸಗಳನ್ನು ಪರಿಶೀಲಿಸಲಿದ್ದಾರೆ. ಈ ಹಿನ್ನೆಲೆ ಸಿಎಂ ಪರಿಶೀಲನೆ ನಡೆಸುವ ಪೂರ್ವಭಾವಿಯಾಗಿ ನಿನ್ನೆ ಬೆಂಗಳೂರಿನ ಹಲವೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ, ಟೆಂಡರ್ ಶ್ಯೂರ್, ವೈಟ್ ಟ್ಯಾಪಿಂಗ್ ಕಾಮಗಾರಿಗಳನ್ನು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತಾ ಪರಿಶೀಲನೆ ನಡೆಸಿದರು.