ಬೆಂಗಳೂರು:ಸರ್ಕಾರಿ ನೌಕರರ ಪ್ರಭಾರ ಭತ್ಯೆಯನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಪ್ರಭಾರ ಭತ್ಯೆಯನ್ನು ಮೂಲ ವೇತನದ ಶೇ. 15ರ ದರದಲ್ಲಿ ನಿಗದಿಗೊಳಿಸಿ ಆದೇಶಿಸಲಾಗಿದೆ. ಪ್ರಭಾರ ಭತ್ಯೆಯ ಪರಿಷ್ಕೃತ ದರ ಸೆ.1ರಿಂದ ಜಾರಿಗೆ ಬರಲಿದೆ.
ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲಿ ಅಥವಾ ತಮ್ಮ ಹುದ್ದೆಯ ಕರ್ತವ್ಯದ ಜೊತೆ ಬೇರೊಂದು ಹುದ್ದೆಯ ಹೆಚ್ಚಿನ ಪ್ರಭಾರದಲ್ಲಿರಿಸಿದಾಗ ಆ ಹುದ್ದೆಯ ವೇತನ ಶ್ರೇಣಿಯ ಕನಿಷ್ಠ ಹಂತದಲ್ಲಿ ಮೂರು ತಿಂಗಳವರೆಗೆ ಶೇಕಡ 7.5ರ ದರದಲ್ಲಿ, ಆ ನಂತರದ ಮೂರು ತಿಂಗಳಲ್ಲಿ ಹೆಚ್ಚಿನ ಅವಧಿಗೆ ಶೇಕಡ 15ರ ದರದಲ್ಲಿ ಪ್ರಭಾರ ಭತ್ಯೆಯನ್ನು ನಿಗದಿಪಡಿಸಿ ಆದೇಶಿಸಲಾಗಿತ್ತು.