ಕರ್ನಾಟಕ

karnataka

ETV Bharat / state

ನಾಮಪತ್ರ ಸಲ್ಲಿಕೆಗೂ ಮುನ್ನ ಬಸವೇಶ್ವರ ಸ್ವಾಮಿ ಆಶೀರ್ವಾದ ಪಡೆದ ರಿಜ್ವಾನ್ ಅರ್ಷದ್ - ನಾಮಪತ್ರ ಸಲ್ಲಿಕೆ

ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಹಾಗಾಗಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ವಿಶ್ವಾಸ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್

By

Published : Mar 25, 2019, 2:03 PM IST

Updated : Mar 25, 2019, 3:24 PM IST

ಬೆಂಗಳೂರು:ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ನಾಮಪತ್ರ ಸಲ್ಲಿಕೆಗೂ ಮುನ್ನ ಮಹದೇವಪುರ ಕ್ಷೇತ್ರದ ಚೀಮಸಂದ್ರದ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್

ನಾಮಪತ್ರ ಸಲ್ಲಿಕೆಗೂ ಮುನ್ನ ಮತದಾರರು ಹಾಗೂ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ಈ ಬಾರಿ ನನ್ನನ್ನು ಆಶೀರ್ವಾದಿಸುವಂತೆ ಮನವಿ ಮಾಡಿದರು. ಕಳೆದ ಬಾರಿ ಮೋದಿ ನೇತೃತ್ವದ ಸರ್ಕಾರ ವೈಫಲ್ಯ ಅನುಭವಿಸಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೋಟ್ ಬ್ಯಾನ್​ನಿಂದ ಬಡವರು ಹೆಚ್ಚು ತೊಂದರೆ ಅನುಭವಿಸುವಂತಾಗಿದ್ದು, ನೋಟ್​ ಬ್ಯಾನ್​ನಿಂದ ಯಾವುದೇ ಪ್ರಯೋಜನವಾಗದೇ ಬಡವರಿಗೆ ಮಾರಕವಾಗಿತ್ತು ಎಂದು ಸಚಿವ ಕೃಷ್ಣ ಬೈರೇಗೌಡ ಇದೇ ವೇಳೆ ಹರಿಹಾಯ್ದರು. ಶಾಸಕ ಬೈರತಿ ಸುರೇಶ್ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿದ್ದರು.

Last Updated : Mar 25, 2019, 3:24 PM IST

ABOUT THE AUTHOR

...view details