ಬೆಳಗಾವಿ:ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಅಪರಾಧಿಗಳಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಮಾರ್ಚ್ 30ರಂದು ಪ್ರಕರಣದಲ್ಲಿ 9 ಮಂದಿ ದೋಷಿಗಳು ಎಂದು ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.
ಇದನ್ನೂ ಓದಿ:ಪಂಜಾಬ್‌ಗೆ ಜಯ ತಂದಿಟ್ಟ ಲಿವಿಂಗ್‌ಸ್ಟೋನ್ ಆಲ್‌ರೌಂಡ್ ಆಟ: ಚೆನ್ನೈಗೆ ಸತತ 3ನೇ ಸೋಲು
ದಶಕಗಳ ಕಾಲ ಭೂಗತ ಲೋಕದಲ್ಲಿ ಸಕ್ರಿಯವಾಗಿದ್ದ ಬನ್ನಂಜೆ ರಾಜಾಗೆ ಮರಣದಂಡನೆಯೋ ಅಥವಾ ಜೀವಾವಧಿ ಶಿಕ್ಷೆಯೋ ಎಂಬುದು ಇಂದು ನಿರ್ಧಾರವಾಗಲಿದೆ. ಪ್ರಕರಣದ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ.ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ಈ ಕೇಸ್‌ನಲ್ಲಿ ದೋಷಿಗಳಾಗಿದ್ದಾರೆ.
ಇದನ್ನೂ ಓದಿ:ಕೀವ್ ಬಳಿ 410 ನಾಗರಿಕರ ಮೃತದೇಹ ಪತ್ತೆ: 'ಜನಾಂಗೀಯ ಹತ್ಯೆ' ಎಂದ ಉಕ್ರೇನ್ ಅಧ್ಯಕ್ಷ
2013 ಡಿಸೆಂಬರ್ 21ರಂದು ಅಂಕೋಲಾದಲ್ಲಿ ಆರ್.ಎನ್. ನಾಯಕ ಕೊಲೆಯಾಗಿತ್ತು. ಆರೋಪಿಗಳ ವಿರುದ್ಧ ಪೊಲೀಸರು ಕೋಕಾ ಅಡಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡಿದ್ದರು. ಇದೀಗ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಬಂದಿದೆ.