ಬೆಂಗಳೂರು: ಬಂಧಿಸಿ ಮಹಜರಿಗೆ ಕರೆತರುವಾಗ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ಹಾಡಹಾಗಲೇ ಲಾಂಗ್ ತೋರಿಸಿ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪಿ ಅಫಾರ್ಜ್ನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ಮಹಜರಿಗೆ ಕರೆತರುವಾಗ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ಲಾಂಗ್ ತೋರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ ಅಕ್ಟೋಬರ್ 22 ರಂದು ಕಾಚರಾಯಕನಹಳ್ಳಿಯ ಬ್ರಹ್ಮಲಿಂಗೇಶ್ವರ ಕಾಂಡಿಮೆಂಟ್ಸ್ ಮಾಲೀಕ ಶರತ್ ಎಂಬುವರಿಗೆ ಲಾಂಗ್ ತೋರಿಸಿ ಹಣ ಸುಲಿಗೆ ಮಾಡಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಲಾಂಗ್ ಹಿಡಿದು ಸುಲಿಗೆ ಮಾಡುತ್ತಿದ್ದ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಆಧರಿಸಿ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧನ ಬಳಿಕ ಅಫಾರ್ಜ್ನನ್ನು ಮಹಜರಿಗೆ ಎಂದು ಕಾಚರಾಯಕನ ಹಳ್ಳಿ ಬಳಿ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಎಡಗಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿ ಅರ್ಫಾಜ್ ಈ ಹಿಂದೆ ಕೆ.ಜಿ.ಹಳ್ಳಿ ಹಾಗೂ ಮಡಿವಾಳ ಠಾಣೆ ವ್ಯಾಪ್ತಿಯ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಬಾಣಸವಾಡಿ ಠಾಣೆಯ ಇನ್ಸ್ಪೆಕ್ಟರ್ ಜಯರಾಜ್ ತಿಳಿಸಿದ್ದಾರೆ.