ಕರ್ನಾಟಕ

karnataka

ETV Bharat / state

ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಬ್ರಾಹ್ಮಣ ಸಮುದಾಯದ ಪಾತ್ರ ಮಹತ್ತರ: ಕಾರಜೋಳ - Karnataka State Brahmin Development Board

ಬ್ರಾಹ್ಮಣ ಸಮುದಾಯದಿಂದ ಅಕ್ಷರ ಮತ್ತು ಸಂಸ್ಕೃತಿ ಬೆಳೆದು ಬಂದಿದೆ. ಸ್ವಾತಂತ್ರ್ಯ ಹೋರಾಟದಲ್ಲೂ ಬ್ರಾಹ್ಮಣ ಸಮುದಾಯವು ಮುಂಚೂಣಿಯಲ್ಲಿತ್ತು ಎಂದು ಡಿಸಿಎಂ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

fsdc
ಕಾರಜೋಳ ಹೇಳಿಕೆ

By

Published : Jan 6, 2021, 7:08 PM IST

ಬೆಂಗಳೂರು: ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಬ್ರಾಹ್ಮಣ ಸಮುದಾಯದ ಪಾತ್ರ ಮಹತ್ತರವಾದುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್​ನಲ್ಲಿ ಏರ್ಪಡಿಸಿದ್ದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಕ್ಷರ ಜ್ಞಾನ, ಸಂಸ್ಕೃತಿಯ ಸಂರಕ್ಷಣೆಯಲ್ಲಿ ಬ್ರಾಹ್ಮಣ ಸಮುದಾಯದ ಪಾತ್ರ ಮಹತ್ತರ. ರಾಜ್ಯ, ರಾಷ್ಟ್ರದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮುದಾಯದ ಪಾತ್ರ ಅಪಾರವಾಗಿದೆ. ಈ ನಾಡಿನಲ್ಲಿ ಹೆಸರಾಂತ ಜ್ಞಾನಿಗಳಾದ ಶಂಕರಾಚಾರ್ಯರು, ಮಧ್ವಾಚಾರ್ಯರು, ರಾಮಾನುಜಾಚಾರ್ಯರು ಜನಿಸಿ ಅಕ್ಷರ ಜ್ಞಾನ, ಸಂಸ್ಕೃತಿ, ಪರಂಪರೆ, ಸಾಹಿತ್ಯ ಕ್ಷೇತ್ರ ಅದರಲ್ಲೂ ಕನ್ನಡ ಸಾಹಿತ್ಯವನ್ನು ಹೆಮ್ಮರವಾಗಿ ಬೆಳೆಸಿದ್ದಾರೆ.

ಕೈಗಾರಿಕಾ ಕ್ಷೇತ್ರಗಳಲ್ಲೂ ಅದ್ವೀತೀಯ ಕೆಲಸ ಮಾಡಿ, ಉದ್ಯೋಗದಾತರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ. 10ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರದಿಂದ ಕಲ್ಪಿಸಲಾಗಿದ್ದು, ರಾಜ್ಯ ಸರ್ಕಾರವು ಇದನ್ನು ಜಾರಿಗೊಳಿಸಲಿದೆ‌. 1994ರಲ್ಲಿ ಭೀಮಾ ನದಿ ಉಕ್ಕಿ ಹರಿದಾಗ ವಿಜಯಪುರ‌ ಜಿಲ್ಲೆಯ ಗೋವಿಂದಪುರ ಗ್ರಾಮ ಮುಳುಗಿ ಹೋಗಿತ್ತು. ಆಗ ಪೇಜಾವರ ಶ್ರೀಗಳು ಆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮವನ್ನು ದತ್ತು ತೆಗೆದುಕೊಂಡು ಪುನರ್ ನಿರ್ಮಾಣ ಮಾಡಿ ಮಾದರಿ ಗ್ರಾಮವನ್ನಾಗಿಸಿ ಪ್ರತಿಯೊಂದು ಮನೆಗೂ ತಲಾ ಒಂದು ಹಸುವನ್ನು ನೀಡಿದರು ಎಂದು ನೆನಪಿಸಿಕೊಂಡರು.

ABOUT THE AUTHOR

...view details