ಬೆಂಗಳೂರು: ಶಾಸಕ ರೋಷನ್ ಬೇಗ್ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದ ವೇಳೆ ಅವರ ಜೊತೆ ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್, ಯೋಗೀಶ್ವರ್ ಕೂಡ ಜೊತೆಯಲ್ಲಿದ್ದರು ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಖಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ ಇದೊಂದು ನಾಚಿಕೆಗೇಡಿನ ವಿಚಾರ, ಎಂಎಲ್ಎಗಳನ್ನ ಖರೀದಿಸುವ ಮೂಲಕ ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಬೇಗ್ ಜೊತೆ ಬಿಎಸ್‌ವೈ ಆಪ್ತಸಹಾಯಕ: ಸಿಎಂ ಕುಮಾರಸ್ವಾಮಿ ಕಿಡಿ - undefined
ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆಯುವ ವೇಳೆ ಅವರ ಜೊತೆ ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಇದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಖಾರವಾಗಿ ಟ್ವೀಟ್ ಮಾಡಿದ್ದಾರೆ.
ಕುಮಾರಸ್ವಾಮಿ, ರೋಷನ್ ಬೇಗ್
ಈ ಬಗ್ಗೆ ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, ಸಿಎಂ ಕುಮಾರಸ್ವಾಮಿ ಆ್ಯಂಡ್ ಟೀಂ ಸರ್ಕಾರ ಉಳಿಸಿಕೊಳ್ಳಲು ಅಡ್ಡದಾರಿ ಹಿಡಿದಿದೆ. ರೋಷನ್ ಬೇಗ್ ಅವರಿಗೆ ಜುಲೈ 19 ರವರೆಗೆ ವಿಚಾರಣೆಗೆ ಹಾಜರಾಗಲು ಅವಕಾಶವಿದೆ. ಹಾಗಾಗಿ ರಾಜ್ಯ ಸರ್ಕಾರ ತನ್ನದೇ ಶಾಸಕರಿಗೆ ಯಾವ ರೀತಿ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಗೊತ್ತಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.