ಬೆಂಗಳೂರು:ಜೈಲಿಗೆ ಹೋಗಿ ಹೊರಬಂದರೂ ಪದೇ ಪದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಕುಖ್ಯಾತ ರೌಡಿಶೀಟರ್ನನ್ನು ನಗರದ ಬಾಗಲಗುಂಟೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಸೋಲದೇವನಹಳ್ಳಿ ಹಾಗೂ ಬಾಗಲಗುಂಟೆ ಪೊಲೀಸ್ ಠಾಣೆಗಳ ರೌಡಿಶೀಟರ್ ಚೇತನ್ ಕುಮಾರ್ ಆಲಿಯಾಸ್ ಚಿಕ್ಕ ಚೇತುನನ್ನು ಗೂಂಡಾ ಕಾಯ್ದೆಯಡಿ ಜೈಲಿಗಟ್ಟಲಾಗಿದೆ. ಈತನ ವಿರುದ್ಧ ಅನ್ನಪೂರ್ಣೆಶ್ವರಿ ನಗರ, ಮಾದನಾಯಕಹಳ್ಳಿ, ಸೋಲದೇವನಹಳ್ಳಿ ಹಾಗೂ ಚಂದ್ರಾಲೇಔಟ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಸುಲಿಗೆ ಹಾಗೂ ದರೋಡೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.