ಬೆಂಗಳೂರು:ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡು, ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ರೌಡಿಶೀಟರ್ನನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಕಡಲೆಕಾಯಿ ಪರಿಷೆಗೆ ಬಂದ ಸಂದರ್ಭದಲ್ಲಿ ಆರೋಪಿಯು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕೆ.ಜಿ ನಗರ ನಿವಾಸಿಯಾಗಿರುವ ರೌಡಿಶೀಟರ್ ಪೃಥಿಕ್ 2019ರಲ್ಲಿ ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ. ಕೆಲ ತಿಂಗಳ ಬಳಿಕ ಜಾಮೀನು ಪಡೆದು ಹೊರಬಂದಿದ್ದ. ವಿಚಾರಣೆಗೆ ಹಾಜರಾಗಲು ಹಲವು ಬಾರಿ ಜಾಮೀನು ರಹಿತ ವಾರೆಂಟ್ ಹೊರಡಿಸಿದರೂ ತಲೆಮರೆಸಿಕೊಂಡಿದ್ದ.