ಬೆಂಗಳೂರು:ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ರೌಡಿಶೀಟರ್ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ಇಲ್ಲಿನ ಗಿರಿನಗರ ಠಾಣೆ ವ್ಯಾಪ್ತಿಯ ಹೊಸಕೆರೆಹಳ್ಳಿ ಬಸ್ ನಿಲ್ದಾಣದ ಬಳಿ ನಡೆದಿದೆ.
ರೌಡಿಶೀಟರ್ ವಿಜಯ್ ಅಲಿಯಾಸ್ ಗೊಣ್ಣೆ ವಿಜಿ ಗಿರಿನಗರ ಠಾಣೆಯ ಕಾನ್ಸ್ಟೇಬಲ್ಗಳಾದ ಕಿರಣ್ ಹಾಗೂ ನೇತ್ರಾ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಮತ್ತೋರ್ವ ಕಾನ್ಸ್ಟೇಬಲ್ ನಾಗೇಂದ್ರಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಸಿಬ್ಬಂದಿಯು ಗಸ್ತಿನಲ್ಲಿದ್ದಾಗ ನಂಬರ್ ಪ್ಲೇಟ್ ರಹಿತ ಸ್ಕೂಟರ್ನಲ್ಲಿ ಬಂದಿದ್ದ ಆರೋಪಿಯನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ, ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಮಾಡಿದ್ದಲ್ಲದೇ, ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.