ಬೆಂಗಳೂರು: ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಸಂಜಯ್ ನಗರ ಠಾಣೆ ಪೊಲೀಸರು ಕುಖ್ಯಾತ ರೌಡಿಶೀಟರ್ ಅವಿನಾಶ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ರೌಡಿ ಶೀಟರ್ ಕಾಲಿಗೆ ಗುಂಡೇಟು - Rowdy Sheeter Avinash arrested by police
ಬೆಂಗಳೂರಿನ ಸಂಜಯ್ ನಗರ ಠಾಣೆ ಇನ್ಸ್ಪೆಕ್ಟರ್ ಬಾಲ್ರಾಜ್ ಅವರು ರೌಡಿ ಶೀಟರ್ ಅವಿನಾಶ್ ಕಾಲಿಗೆ ಬೆಳಗ್ಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ರಾಮಮೂರ್ತಿ ನಗರ ನಿವಾಸಿಯಾದ ರೌಡಿಶೀಟರ್ ಅವಿನಾಶ್, ಸಂಜಯ್ ನಗರ ಪೊಲೀಸ್ ಠಾಣೆ ಸಿಬ್ಬಂದಿ ಸಂತೋಷ್ ಎಂಬುವರ ಮೇಲೆ ಹಲ್ಲೆ ನೆಡೆಸಿದ್ದ. ಈ ಹಿನ್ನೆಲೆಯಲ್ಲಿ ಸಂಜಯ್ ನಗರ ಠಾಣೆ ಇನ್ಸ್ಪೆಕ್ಟರ್ ಬಾಲ್ರಾಜ್ ನೇತೃತ್ವದಲ್ಲಿ ಪೊಲೀಸರು ಬೆಳಗ್ಗೆ ಕಾರ್ಯಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಅಷ್ಟೇ ಅಲ್ಲದೆ, ಈ ಹಿಂದೆ ಕೂಡ ಮುನಿರಾಜು ಎಂಬಾತ ತನ್ನ ಹೆಂಡತಿ ಮಗುವಿನೊಂದಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ತೆರಳುತ್ತಿದ್ದಾಗ ಅವಿನಾಶ್ ಆ್ಯಂಡ್ ಗ್ಯಾಂಗ್ ಹಲ್ಲೆ ಮಾಡಿದ್ದರು. ಈ ಕುರಿತು ಯಲಹಂಕ ಪೊಲೀಸ್ ಠಾಣೆ ದೂರು ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.