ಕೆ.ಆರ್.ಪುರ (ಬೆಂಗಳೂರು): ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕುಳ್ಳ ವೆಂಕಟೇಶ್ ಹತ್ಯೆಯ ಭೀಕರ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.
ಸೆಪ್ಟೆಂಬರ್ 25ರಂದು ಕುಳ್ಳ ವೆಂಕಟೇಶ್ ರಾಮಮೂರ್ತಿನಗರದ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಜಮೀನು ನೋಡಲು ಹೋಗುತ್ತಿದ್ದ. ಆಗ ಆರು ಜನ ದುಷ್ಕರ್ಮಿಗಳು ಆಟೋ ಮತ್ತು ದ್ವಿಚಕ್ರ ವಾಹನದಲ್ಲಿ ಬಂದು ವೆಂಕಟೇಶ್ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಹೀಗಾಗಿ ಆತ ನೆಲಕ್ಕೆ ಬಿದ್ದಿದ್ದಾನೆ, ಈ ವೇಳೆ ದುಷ್ಕರ್ಮಿಗಳು ಶಸ್ತ್ರಾಸ್ತಗಳಿಂದ ಅಲ್ಲೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.