ಕರ್ನಾಟಕ

karnataka

ETV Bharat / state

ಟೀ ಕುಡಿಯಲು ಬಂದಾಗ ಅಟ್ಯಾಕ್: ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ - Bengaluru crime

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ. ಹಳೆ ವೈಷಮ್ಯದಿಂದ ಹತ್ಯೆ ಶಂಕೆ.

rowdy sheeter murder
ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

By ETV Bharat Karnataka Team

Published : Nov 9, 2023, 10:34 AM IST

ಬೆಂಗಳೂರು:ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ 9:30ರ ಸುಮಾರಿಗೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್​​​​. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳ ಗುಂಪು, ​ಸಹದೇವ್ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ಪರಾರಿಯಾಗಿದೆ.

ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಡಿದ್ದಾರೆ. ಕೊಲೆಯಾದ ವ್ಯಕ್ತಿ ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರಬಹುದು‌ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: "ನಾನು ಸತ್ತಾಗ ಬೆಂಕಿ ಇಡಬೇಕಾದ ಮಗನಿಗೆ ನಾನೇ ಬೆಂಕಿ ಇಡಬೇಕಾಯಿತಲ್ಲಾ", ಪೋಷಕರ ಆಕ್ರಂದನ

ABOUT THE AUTHOR

...view details