ಕರ್ನಾಟಕ

karnataka

ಸಿದ್ದರಾಮಯ್ಯ ಪ್ರಚಾರಕ್ಕೆ ಅಡ್ಡಿ ಆರೋಪ: ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​​​

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರಚಾರಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

By

Published : Oct 28, 2020, 8:12 AM IST

Published : Oct 28, 2020, 8:12 AM IST

FIR registered against BJP workers, FIR registered against BJP workers in Bangalore, RR nagar by-poll, RR nagar by-poll 2020, RR nagar by-poll 2020 news, ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲು, ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲು, ಆರ್​ಆರ್​ ನಗರ ಉಪಚುನಾವಣೆ, ಆರ್​ಆರ್​ ನಗರ ಉಪಚುನಾವಣೆ 2020, ಆರ್​ಆರ್​ ನಗರ ಉಪಚುನಾವಣೆ 2020 ಸುದ್ದಿ,
9 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲು

ಬೆಂಗಳೂರು: ಆರ್.ಆರ್. ನಗರ ಉಪ ಚುನಾವಣೆ ವೇಳೆ ಕಾಂಗ್ರೆಸ್ ಪ್ರಚಾರಕ್ಕೆ ತಡೆ ಮಾಡಿದ ಆರೋಪದ ಮೇರೆಗೆ ಮಾಜಿ ಕಾರ್ಪೋರೇಟರ್ ಜಿ.ಕೆ.ವೆಂಕಟೇಶ್ ಸೇರಿ 9 ಮಂದಿ ವಿರುದ್ಧ ಯಶವಂತಪುರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

9 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲು

ಮಾಜಿ ಸಿಎಂ ಸಿದ್ದರಾಮಯ್ಯ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸ್ತಿದ್ರು. ಈ ವೇಳೆ ಏಕಾಏಕಿ ಬಂದ ಜಿ.ಕೆ.ವೆಂಕಟೇಶ್, ಭರತ್ ಸಿಂಗ್, ಕೊತ್ತಂಬರಿ ನಾಗ, ಖಾಜಾ, ರತ್ನಮ್ಮ ಇತರೆ ಹಲವಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರಕ್ಕೆ ಅಡ್ಡಿ ಮಾಡಿದಲ್ಲದೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸದ್ಯ ಆರ್.ಆರ್. ನಗರ ಉಪ ಕದನ ರಂಗೇರಿರುವ ಕಾರಣ ಹಿರಿಯಾಧಿಕಾರಿಗಳು ಕೂಡ ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಎರಡೂ ಪಕ್ಷದ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದ್ದಾರೆ.

9 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲು

ಘಟನೆ ಬೆಳಕಿಗೆ ಬಂದ ತಕ್ಷಣ ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ನೇತೃತ್ವದಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. ಸದ್ಯ ನಿನ್ನೆ ಸಿದ್ದರಾಮಯ್ಯ ಪ್ರಚಾರದ ವೇಳೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ 506, 341 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ABOUT THE AUTHOR

...view details