ಕರ್ನಾಟಕ

karnataka

ETV Bharat / state

ಬಿಜೆಪಿ ಅಭ್ಯರ್ಥಿ 60 ಕೋಟಿ ರೂ.ಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ: ಜೆಡಿಎಸ್​ ಅಭ್ಯರ್ಥಿ ಆರೋಪ - jds candidate blame on muniratna

ಯಶವಂತಪುರ ವಾರ್ಡ್‌ನಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಮತ್ತೆ ಜನರ ಬಳಿ ಹೋಗಿ ಮತ ಕೇಳುವ ನೈತಿಕತೆ ಇಲ್ಲ ಎಂದು ವಿ.ಕೃಷ್ಣಮೂರ್ತಿ ಅವರು ಆರೋಪಿಸಿದ್ದಾರೆ.

Krishnamurthy
ಕೃಷ್ಣಮೂರ್ತಿ

By

Published : Oct 20, 2020, 4:47 AM IST

ಬೆಂಗಳೂರು:ಬಿಜೆಪಿ ಅಭ್ಯರ್ಥಿ 50 ರಿಂದ 60 ಕೋಟಿ ರೂ.ಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಅವರಿಗೆ ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಆರೋಪಿಸಿದ್ದಾರೆ.

ಯಶವಂತಪುರ ವಾರ್ಡ್‌ನಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಮುನಿರತ್ನ ಅವರು ಬಿಜೆಪಿ ಸೇರಿದ್ದಾರೆ. ಅವರಿಗೆ ಮತ್ತೆ ಜನರ ಬಳಿ ಹೋಗಿ ಮತ ಕೇಳುವ ನೈತಿಕತೆ ಇಲ್ಲ ಎಂದರು.

ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲ ಪ್ರಯತ್ನ ನಡೆಸುತ್ತಿವೆ. ನಾವೂ ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗದೆ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮತ್ತಿಕೆರೆಯ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ, ಯಶವಂತಪುರ, ಬಿಇಎಂಎಲ್‌ ಬಡಾವಣೆ, ಐಟಿಐ ಲೇಔಟ್‌, ಜ್ಞಾನಭಾರತಿ, ಶ್ರೀನಿವಾಸನಗರ ವಾರ್ಡ್‌ನಲ್ಲಿ ಮನೆ ಮನೆ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷರಾದ ಆರ್.ಪ್ರಕಾಶ್ ಸೇರಿ ಅನೇಕ ಮುಖಂಡರು ಹಾಜರಿದ್ದರು.

ABOUT THE AUTHOR

...view details