ಬೆಂಗಳೂರು: ಚುನಾವಣೆ ಕರ್ತವ್ಯದಲ್ಲಿ ಮಡಿದ ಅಧಿಕಾರಿಗಳ ಕುಟುಂಬಕ್ಕೆ ತಲಾ 15ಲಕ್ಷ ರೂ. ಪರಿಹಾರ ನೀಡಲು ಚುನಾವಣಾ ಆಯೋಗ ಆದೇಶ ನೀಡಿದೆ.
ಚುನಾವಣಾ ಕರ್ತವ್ಯದಲ್ಲಿ ಮಡಿದವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ - Election duty death
ಚುನಾವಣೆ ಸಂದರ್ಭದಲ್ಲಿ ಸಾವನ್ನಪ್ಪಿದ ಅಧಿಕಾರಿಗಳ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು, ಈ ಹಿನ್ನೆಲೆ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡಲಾಗುತ್ತಿದೆ
![ಚುನಾವಣಾ ಕರ್ತವ್ಯದಲ್ಲಿ ಮಡಿದವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ](https://etvbharatimages.akamaized.net/etvbharat/images/768-512-3091062-thumbnail-3x2-nin.jpg)
15 ಲಕ್ಷ ರೂ. ಪರಿಹಾರ
ವಿಶೇಷ ಪ್ರಕರಣದಡಿ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಈ ಬಾರಿಯ ರಾಜ್ಯದಲ್ಲಿ ಚುನಾವಣಾ ಕಾರ್ಯದಲ್ಲಿದ್ದ 8 ಜನ ಅಧಿಕಾರಿಗಳು ನಿಧನ ಹೊಂದಿದ್ದಾರೆ. ಈ ಪೈಕಿ ಏಳು ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಒಬ್ಬರು ಅಪಘಾತದಿಂದ ಮೃತ ಪಟ್ಟಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಪರಿಹಾರ ನೀಡುವಂತೆ ನಿರ್ದೇಶನ ನೀಡಿತ್ತು. ಇದೀಗ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ.
TAGGED:
Election duty death