ಕರ್ನಾಟಕ

karnataka

ETV Bharat / state

ಅಡಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ 4 ಕೋಟಿ ರೂಪಾಯಿ ಅನುದಾನ ಬಿಡುಗಡೆ - ಈಟಿವಿ ಭಾರತ ಕನ್ನಡ

ರಾಜ್ಯದ ಹಲವೆಡೆ ಅಡಕೆ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ, ತೋಟಗಾರಿಕೆ ಇಲಾಖೆ ಔಷಧ ಹಾಗೂ ಸಿಂಪರಣೆ ವೆಚ್ಚ ಭರಿಸಲು ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ.

rs-4-crore-grant-released-to-control-areca-nut-leaf-spot-disease
ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ 4 ಕೋಟಿ ರೂಪಾಯಿ ಅನುದಾನ ಬಿಡುಗಡೆ

By

Published : Oct 3, 2022, 8:52 PM IST

ಬೆಂಗಳೂರು:ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರ್ಕಾರ ಒಟ್ಟೂ 8 ಕೋಟಿ ರೂಪಾಯಿಗಳಷ್ಟು ಅನುದಾನ ನಿಗದಿ ಮಾಡಿದೆ. ಅದರಲ್ಲಿ ನಾಲ್ಕು ಕೋಟಿ ರೂಪಾಯಿ ತಕ್ಷಣಕ್ಕೆ ರೈತರಿಗೆ ವಿತರಿಸಲು, ಬಿಡುಗಡೆ ಮಾಡಲಾಗಿದೆ.

ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಹೆಕ್ಟೇರ್ ಅಡಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ, ತೋಟಗಾರಿಕೆ ಇಲಾಖೆ ಔಷಧ ಹಾಗೂ ಸಿಂಪರಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆಗೊಳಿಸಿದೆ. ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿನಂತಿಸಿದ್ದಾರೆ.

ರೋಗ ನಿಯಂತ್ರಣಕ್ಕೆ, ಉತ್ತಮ ಗುಣಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್​​ಗೆ, 4,000 ರೂಪಾಯಿ ಅನುದಾನ, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ, ಅನುದಾನ ಒದಗಿಸಲಾಗುವುದು ಎಂದರು.

ಎಲೆ ಚುಕ್ಕೆ ಬಾಧೆ ಕುರಿತು, ಕಳೆದ ವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ತೋಟಗಾರಿಕಾ ಸಚಿವ ಮುನಿರತ್ನ, ಮೀನುಗಾರಿಕೆ ಸಚಿವ ಅಂಗಾರ ಅವರೊಂದಿಗೆ, ಸಭೆ ನಡೆಸಿ, ರೋಗ ನಿಯಂತ್ರಣದ ಅಗತ್ಯದ ಬಗ್ಗೆ ಚರ್ಚಿಸಿದ್ದರು. ಸುಮಾರು 20,000 ಹೆಕ್ಟೇರ್ ಅಡಕೆ ಬೆಲೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಭಾದಿಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಹಾಗೂ ರೋಗ ನಿಯಂತ್ರಣಕ್ಕೆ ಒಟ್ಟು ಎಂಟು ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದೆ ಎಂದು ತೋಟಗಾರಿಕಾ ತಜ್ಞರು, ಶಿಫಾರಸು ಮಾಡಿದ್ದಾರೆ.

ಇದನ್ನೂ ಓದಿ:ಜಾನುವಾರು ಚರ್ಮಗಂಟು ರೋಗ: ಪರಿಹಾರ ಧನಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ

ABOUT THE AUTHOR

...view details