ಕರ್ನಾಟಕ

karnataka

By

Published : Apr 4, 2022, 10:06 PM IST

ETV Bharat / state

RTE ಮೊದಲ ಸುತ್ತಿನ ಸೀಟು ಹಂಚಿಕೆ ಆರಂಭ : ಏ.16 ರಂದು ದಾಖಲಾತಿಗೆ ಕೊನೆಯ ದಿನ

ಇಂದು ಮೊದಲನೇ ಸುತ್ತಿನ ಲಾಟರಿಯನ್ನು ಆನ್‌ಲೈನ್ ಮೂಲಕ ನಡೆಸಲಾಗಿದ್ದು, ಈ ಪ್ರಕ್ರಿಯೆಯಲ್ಲಿ 7,596 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. 696 ಅರ್ಜಿಗಳನ್ನ ರಿಜೆಕ್ಟ್ ಮಾಡಲಾಗಿದೆ.

ಕರ್ನಾಟಕ ಶಿಕ್ಷಣ ಇಲಾಖೆ
ಕರ್ನಾಟಕ ಶಿಕ್ಷಣ ಇಲಾಖೆ

ಬೆಂಗಳೂರು: ಆರ್ ಟಿ ಇ ಮೊದಲ ಸುತ್ತಿನ ಸೀಟು ಹಂಚಿಕೆ ಆರಂಭವಾಗಿದ್ದು, ಏಪ್ರಿಲ್ 16 ರಂದು ದಾಖಲಾತಿಗೆ ಕೊನೆಯ ದಿನವಾಗಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಆರ್ ಟಿಇ ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಸುಮಾರು 20,414 ಅರ್ಜಿಗಳು ಬಂದಿದ್ದವು.‌ ಅದರಲ್ಲಿ ಅರ್ಹ 19,718 ಅರ್ಜಿಗಳನ್ನು ಮೊದಲ ಸುತ್ತಿನ ಲಾಟರಿಗೆ ಪರಿಗಣಿಸಲಾಗಿದೆ.‌

ಇಂದು ಮೊದಲನೇ ಸುತ್ತಿನ ಲಾಟರಿಯನ್ನು ಆನ್‌ಲೈನ್ ಮೂಲಕ ನಡೆಸಲಾಗಿದ್ದು, ಈ ಪ್ರಕ್ರಿಯೆಯಲ್ಲಿ 7,596 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. 696 ಅರ್ಜಿಗಳನ್ನ ರಿಜೆಕ್ಟ್ ಮಾಡಲಾಗಿದೆ. ಈಗಾಗಲೇ ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್​​ಎಂಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಪೋಷಕರು ಏಪ್ರಿಲ್ 5 ರಿಂದ 16 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾತಿ ಮಾಡಲು ಶಿಕ್ಷಣ ಇಲಾಖೆ ತಿಳಿಸಿದೆ.‌ ಇನ್ನು ಸೀಟು ಹಂಚಿಕೆ ವಿವರ ಇಲಾಖಾ ವೆಬ್​ಸೈಟ್ (www.schooleducation.kar.nic.in) ನಲ್ಲಿ ಲಭ್ಯವಿದೆ.‌

ABOUT THE AUTHOR

...view details