ಬೆಂಗಳೂರು: ರಾಜ್ಯದಲ್ಲಿ 20 ಸಾವಿರ ಕಿ.ಮೀ. ಗ್ರಾಮೀಣ ಮತ್ತು ಜಿಲ್ಲಾ ಮುಖ್ಯ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಇಂದು ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಾ ತಾಲೂಕುಗಳನ್ನು ಸಮನಾಗಿ ಜಿಲ್ಲಾ ಮತ್ತು ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಬಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ 28 ಕಿ.ಮೀ. ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಕಳೆದ ಜೂನ್‍ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದ್ದು, ರಸ್ತೆ ನಿರ್ವಹಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.