ಕರ್ನಾಟಕ

karnataka

ETV Bharat / state

ರಾಜ್ಯದ ಗ್ರಾ.ಪಂ ವ್ಯಾಪ್ತಿಯಲ್ಲಿ 22.60 ಲಕ್ಷ ಮಂದಿ ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ: ಸಚಿವ ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಲೇಟೆಸ್ಟ್ ನ್ಯೂಸ್

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್​ ಲಸಿಕೆ ಪಡೆದವರ ಕುರಿತು ಮಾಹಿತಿ ನೀಡಿದರು.

Minister KS Eshwarappa
ಸಚಿವ ಕೆ.ಎಸ್.ಈಶ್ವರಪ್ಪ

By

Published : Jul 1, 2021, 8:10 PM IST

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಒಟ್ಟು 22.60 ಲಕ್ಷ ಮಂದಿ ಮೊದಲ‌ ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡುತ್ತಾ, ಇಲ್ಲಿಯವರೆಗೆ 22,60,094 ಜನರು ಮೊದಲ ಡೋಸ್ ಲಸಿಕೆ ಪಡೆದರೆ, 4,51,422 ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ವಿವರಿಸಿದರು.

ಲಸಿಕೆ ಹಾಕಿಸಿಕೊಂಡವರ ಕುರಿತು ಮಾಹಿತಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ

ಸಚಿವರು ನೀಡಿರುವ ಮಾಹಿತಿ:

  • 60 ವರ್ಷ ಮೇಲ್ಪಟ್ಟವರ ಪೈಕಿ 12,68,699 ಮೊದಲ ಡೋಸ್ ಪಡೆದಿದ್ದಾರೆ. ಎರಡನೇ ಡೋಸ್ ಪಡೆದವರ ಸಂಖ್ಯೆ 2,45,408ರಷ್ಟಿದೆ.
  • 45 ವರ್ಷ ಮೇಲ್ಪಟ್ಟವರ ಪೈಕಿ 8,98,945 ಮಂದಿ ಮೊದಲ ಡೋಸ್ ಲಸಿಕೆ ಪಡೆದರೆ, 1,77,148 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.
  • 18 ವರ್ಷ ಮೇಲ್ಪಟ್ಟವರ ಪೈಕಿ 92,450 ಮಂದಿ ಮೊದಲ ಡೋಸ್ ಲಸಿಕೆ ಪಡೆದರೆ, 28,866 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದರು.

ಎರಡನೇ ಅಲೆ ವೇಳೆ ಗ್ರಾಮ ಪಂಚಾಯಿತಿಗಳಿಗೆ 1,12,000 ಮಂದಿ ವಲಸಿಗರು ಬಂದಿದ್ದಾರೆ. ಈ ಪೈಕಿ 68,575 ಮಂದಿ ವಲಸಿಗರು ನೆರವು ಪಡೆದಿದ್ದಾರೆ. 4,18,555 ಸೋಂಕಿತರು ಸಿಸಿಸಿಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ನರೇಗಾ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಒಟ್ಟು 13 ಕೋಟಿ ಮಾನವ ದಿನ ಸೃಜಿಸುವ ಗುರಿ ನೀಡಲಾಗಿದ್ದು, ಈವರೆಗೆ 4.49 ಕೋಟಿ ಮಾನವ ದಿನ ಸೃಜಿಸಲಾಗಿದೆ. ಒಟ್ಟು 18.68 ಲಕ್ಷ ಕುಟುಂಬಗಳಿಗೆ ಯೋಜನೆಯಡಿ ಉದ್ಯೋಗವನ್ನು ಕಲ್ಪಿಸಲಾಗಿದೆ. ಒಟ್ಟು 9.10 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಗೊಂಡಿದ್ದು, ಸುಮಾರು 84 ಸಾವಿರ ಕಾಮಗಾರಿಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದರು.

ನರೇಗಾ ಯೋಜನೆಗೆ ಯಾವುದೇ ಅನುದಾನ ಕೊರತೆ ಇಲ್ಲ. ವಿಳಂಬವಿಲ್ಲದೇ ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 1544.45 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದರು.

For All Latest Updates

ABOUT THE AUTHOR

...view details