ಕರ್ನಾಟಕ

karnataka

ETV Bharat / state

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಟಿಟಿಡಿ ಸದಸ್ಯರಾಗಿ ನೇಮಕ - Andhra Pradesh Chief Minister YS Jagan Mohan Reddy

ಈ ಹಿಂದೆ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್​ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ ಶಾಸಕ ಎಸ್.ಆರ್.ವಿಶ್ವನಾಥ್ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

s-r-viswanath
ಎಸ್. ಆರ್​ ವಿಶ್ವನಾಥ್

By

Published : Sep 15, 2021, 10:04 PM IST

ಬೆಂಗಳೂರು:ಆಂಧ್ರಪ್ರದೇಶದ ಪ್ರತಿಷ್ಠಿತ ತಿರುಮಲ ತಿರುಪತಿ ಟ್ರಸ್ಟ್​ಗೆ ಕರ್ನಾಟಕದ ಶಾಸಕ ಎಸ್. ಆರ್. ವಿಶ್ವನಾಥ್ ಅವರನ್ನು ಸದಸ್ಯರನ್ನಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎಸ್.ಆರ್ ವಿಶ್ವನಾಥ್ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್​ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ 3 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿರುವುದಕ್ಕೆ ವಿಶ್ವನಾಥ್ ಅವರು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಮತ್ತು ಆಂಧ್ರಪ್ರದೇಶ ಸರ್ಕಾರದ ಪಂಚಾಯತ್ ರಾಜ್ ಮತ್ತು ಗಣಿ ಸಚಿವ ರಾಮಚಂದ್ರರೆಡ್ಡಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

'ಈ ಹುದ್ದೆಗೆ ನನ್ನನ್ನು ನೇಮಕ ಮಾಡಿರುವುದಕ್ಕೆ ಹರ್ಷವೆನಿಸಿದೆ. ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾದಿಗಳಿಗೆ ಸೇವೆ ಸಲ್ಲಿಸುವ ಅದೃಷ್ಠ ನನ್ನದಾಗಿದೆ.'

- ಎಸ್‌.ಆರ್‌.ವಿಶ್ವನಾಥ್‌, ಯಲಹಂಕ ಶಾಸಕ

ಇದನ್ನೂ ಓದಿ:ವಿಧಾನಸಭೆಯಲಿ 3ನೇ ದಿನ.. ಆಡಳಿತ-ಪ್ರತಿಪಕ್ಷಗಳ 'ತೈಲ' ವಾಗ್ಯುದ್ಧ.. ಸರ್ಕಾರಕ್ಕೆ ಮೈ'ಶುಗರ್‌'ತಂದ ಮೀಸಲು ಹೆಚ್ಚಳ..

ABOUT THE AUTHOR

...view details