ಬೆಂಗಳೂರು :ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿರುವ ಇವರು, ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಸಾ ರಾ ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ತಮ್ಮ ದಿಢೀರ್ ವರ್ಗಾವಣೆಗೆ ನ್ಯಾಯ ಕೇಳಲು KATಗೆ ಹೋಗಿದ್ದ ಇದೇ ಅಧಿಕಾರಿ, ಮೈಸೂರಿನಲ್ಲಿ ಉಲ್ಟಾ ಹೊಡೆದ ಕಥೆ ಇಡೀ ನಾಡಿಗೆ ಗೊತ್ತಿದೆ. ಇಂಥವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.