ಕರ್ನಾಟಕ

karnataka

ETV Bharat / state

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸು: ಸಿದ್ದರಾಮಯ್ಯ - twitter

ಕಾಂಗ್ರೆಸ್​​ ಸರ್ಕಾರ ಅಧಿಕಾರಕ್ಕೆ ಬಂದರೆ ಎಜೆ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು: ಸಿದ್ದರಾಮಯ್ಯ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು: ಸಿದ್ದರಾಮಯ್ಯ

By

Published : Dec 11, 2022, 10:48 PM IST

ಬೆಂಗಳೂರು:ಸಾಮಾಜಿಕ ನ್ಯಾಯ ಎಂಬ ಟ್ಯಾಗ್ ಲೈನ್ ನಡಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​

ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​

ರಾಜ್ಯ ಬಿಜೆಪಿ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು.

ಸಿದ್ದರಾಮಯ್ಯ ಟ್ವೀಟ್​

ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂಬ ಭರವಸೆಯನ್ನು ಸರಣಿ ಟ್ವೀಟ್ ಮೂಲಕ ನೀಡಿದ್ದಾರೆ.

ಪ್ರಿಯಾಂಕ್​ ಖರ್ಗೆ ಟ್ವೀಟ್​

ಪ್ರಿಯಾಂಕ್ ಖರ್ಗೆ ಬೇಸರ:ಇದೇ ವಿಚಾರವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸಹ ಟ್ವೀಟ್ ಮಾಡಿದ್ದು, ಒಳ ಮೀಸಲಾತಿಯ ಸದಾಶಿವ ಆಯೋಗ ವರದಿ ಜಾರಿಗಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯವೆಸಗಿದೆ ಬಿಜೆಪಿ ಸರ್ಕಾರ. ಕೇಸರಿ ಶಾಲು ಧರಿಸಿ ದಾಂಧಲೆ ಮಾಡುವವರಿಗೆ ರಾಜಮರ್ಯಾದೆ ಕೊಡುವ ಸರ್ಕಾರ, ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದ ದಲಿತರೆಂದರೆ ಬಿಜೆಪಿಯ ಲಾಠಿಗಳಿಗೆ ಅಷ್ಟೊಂದು ತಾತ್ಸಾರವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಿಶ್ವದ ಅತಿ ಎತ್ತರದ ಏಕತೆಯ ಪ್ರತಿಮೆ ವೀಕ್ಷಿಸಿದ ಬಿಎಸ್​ವೈ

ABOUT THE AUTHOR

...view details